ಗ್ರಾಮೀಣ ಪ್ರದೇಶಕ್ಕೆ ರಾಜ್ಯ ಸರಕಾರದಿಂದ ಉಚಿತ ವೈ-ಫೈ ಸೇವೆ

16 Nov 2017 5:37 PM | General
557 Report

ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಕಲ್ಪಿಸುವದರಿಂದ ಡಿಜಿಟಲ್ ಯೋಜನೆಗೆ ಸಹಾಯವಾಗಲಿದೆ ಹಾಗೂ ಪ್ರತಿನಗರ ಮತ್ತು ಪಟ್ಟಣಗಳಲ್ಲಿರುವ ಉದ್ಯಮಿಗಳನ್ನು ತಲುಪಲು ಸಹಾಯವಾಗಲಿದೆ ಎಂದು ಬೆಂಗಳೂರು ತಂತ್ರಜ್ಞಾನ ಸಮ್ಮೇಳನ- 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವರ್ಷ ೨,೫೦೦ ಗ್ರಾಮ ಪಂಚಾಯ್ತಿಗಳಿಗೆ ವೈಫೈ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು ನಾಲ್ಕು ಸಾವಿರ ಗ್ರಾಮ ಪಂಚಾಯ್ತಿಗಳಿದ್ದು, ಮುಂದಿನ ದಿನಗಳಲ್ಲಿ ಈ ಎಲ್ಲಾ ಪಂಚಾಯ್ತಿಗಳಿಗೂ ವೈಫೈ ಸೌಲಭ್ಯ ಸಿಗಲಿದೆ. ರಾಜ್ಯ ಸರ್ಕಾರ ಮತ್ತು ಗ್ರಾಮ ಮಂಚಾಯ್ತಿಗಳೇ ಇದರ ನಿರ್ವಹಣೆಯನ್ನು ನೋಡಿಕೊಳ್ಳಲಿದ್ದು, ಇದಕ್ಕಾಗಿ ಸರ್ಕಾರ ಪ್ರತಿ ತಿಂಗಳು ಎರಡೂವರೆ ಲಕ್ಷ ರೂ. ಖರ್ಚು ಮಾಡಲಿದೆ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು ನವೆಂಬರ್ 16 ರಿಂದ 18 ರವರೆಗೆ ಬೆಂಗಳೂರು ತಂತ್ರಜ್ಞಾನ ಸಮ್ಮೇಳನವನ್ನು ಆಯೋಜಿಸಿದೆ.

    

Edited By

Shruthi G

Reported By

Madhu shree

Comments

Cancel
Done