ಅಮೀರೆ ಶರಿಯತ್ ಹಝ್ರತ್ ಮೌಲಾನಾ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ಬಾಖ್ವಿ ಇಂದು ಮುಂಜಾನೆ ನಿಧರಾಗಿದ್ದಾರೆ.

08 Sep 2017 10:19 AM | Crime
346 Report

ಬೆಂಗಳೂರು: ಅಮೀರೆ ಶರಿಯತ್ ಹಝ್ರತ್ ಮೌಲಾನಾ ಮುಫ್ತಿ ಮುಹಮ್ಮದ್ ಅಶ್ರಫ್ ಅಲಿ ಬಾಖ್ವಿ(೮೦) ಇಂದು ಮುಂಜಾನೆ ೨.೩೦ರ ಸುಮಾರಿಗೆ ನಿಧರಾಗಿದ್ದಾರೆ.

ರಾಜ್ಯದ ಪ್ರಖ್ಯಾತ ಇಸ್ಲಾಮಿ  ವಿದ್ವಾಂಸರು, ದೇಶ ವಿದೇಶಗಳಲ್ಲಿ ಚಿರಪರಿಚಿತರೂ ಮೌಲಾನ ಅಶ್ರಫ್ ಅಲಿ, ಬೆಂಗಳೂರಿನ ಗೋವಿಂದಪುರದಲ್ಲಿರುವ ಪ್ರತಿಷ್ಟಿತ ಇಸ್ಲಾಮೀ ಶರೀಯತ್ ಕಾಲೇಜ್, ದಾರುಲ್ ಉಲೂಂ ಸಬೀಲುರ್ರಷಾದ್ ಇದರ ಪ್ರಾಂಶುಪಾಲರು ಆಗಿದ್ದರು.

ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ನ ಕಾರ್ಯಕಾರಿ ಸಮಿತಿ ಸದಸ್ಯ, ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಉಪಾಧ್ಯಕ್ಷ, ಇಸ್ಲಾಮಿ ಫಿಖಾ ಅಕಾಡೆಮಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಅವರ ತಂದೆ ಹಝ್ರತ್ ಮೌಲಾನ ಅಬುಸವುದ್ ನಿಧನ ನಂತರ ದಾರೂಲ್ ಉಲೂಂ ಸಬೀಲುರ್ರಷಾದ್ ನ ನೇತೃತ್ವ ವಹಿಸಿಕೊಂಡ ಅಶ್ರಫ್ ಅಲಿ ಅವರು ಅದನ್ನು ಯಶಸ್ವಿಯಾಗಿ ಮುನ್ನಡೆಸಿದರು. ಕೇವಲ ಧಾರ್ಮಿಕ ವಿಚಾರಗಳಿಗಷ್ಟೇ ಸೀಮಿತವಾಗಿರದೆ ಸಾಮಾಜಿಕ ಹೋರಾಟಗಳಲ್ಲಿಯೂ ಸಕ್ರಿಯರಾಗಿದ್ದರು.

ಮೃತರ ನಮಾಝೆ ಜನಾಝವನ್ನು ಸೆ.೯ರಂದು ಬೆಳಗ್ಗೆ ೧೦ ಗಂಟೆಗೆ ಸಬೀಲುರ್ರಷಾದ್ ನಲ್ಲಿ ನೆರವೇರಿಸಲಿದ್ದು, ಅವರ ಪಾರ್ಥಿವ ಶರೀರವನ್ನು ಕಾಲೇಜಿನ ಆವರಣದಲ್ಲಿ ದಫನ್ ಮಾಡಲಾಗುತ್ತದೆ.

ಮೌಲಾನ ಅಶ್ರಫ್ ಅಲಿ ದಂಪತಿಗೆ ನಾಲ್ಕು ಗಂಡು ಹಾಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ.

Edited By

venki swamy

Reported By

venki swamy

Comments