ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಮೂವರ ಬಂಧನ

12 Sep 2017 5:13 PM | Crime
285 Report

ವಿಧಾನ ಸೌಧ ಹಾಗೂ ನೆಹರು ತಾರಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಅನಾಮಧೇಯ ವ್ಯೆಕ್ತಿಗಳು 100 ಕ್ಕೆ ಕರೆ ಮಾಡಿ ಬಾಂಬ್ ಬೆದರಿಕೆಯ ಹಾಕಿದ ಹಿನ್ನೆಲೆಯಲ್ಲಿ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು . ವಿಧಾನಸೌಧ ಮತ್ತು ನೆಹರು ತಾರಾಲಯದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದ ನಂತರ ಅದು ಹುಸಿ ಬಾಂಬ್ ಬೆದರಿಕೆ ಎಂಬುದು ಖಚಿತವಾಗಿದೆ. ಬಂಧಿತರನ್ನು ಸುರೇಶ್, ನಾಗರಾಜ್ ಮತ್ತು ಶ್ರೀಧರ್ ಎಂದು ಗುರ್ತಿಸಲಾಗಿದೆ. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು . ಇದೀಗ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

Courtesy: Kannadaprabha

Comments