ಗೌರಿ ಹತ್ಯೆ ಪ್ರಕರಣ:ಇಂದು ನವೀನ್ ಕುಮಾರ್ ಜಾಮೀನು ಅರ್ಜಿ ವಿಚಾರಣೆ  

09 Jul 2018 9:54 AM | Crime
419 Report

ಇಂದು ಗೌರಿ ಲಂಕೇಶ್ ಹತ್ಯೆಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಯಾದ ನವೀನ್ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.

ಸೆಷನ್ಸ್ ಕೋರ್ಟ್ ನವೀನ್ ಕುಮಾರ್ ಸಲ್ಲಿಸಿದ್ದಂತಹ ಜಾಮೀನು ಅರ್ಜಿಯ ಆದೇಶವನ್ನು ಪ್ರಕಟ ಮಾಡಲಿದೆ. ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ರಾಮಲಿಂಗೇಗೌಡ ಇಂದು ತೀರ್ಪನ್ನು ಪ್ರಕಟಿಸಲಿದ್ದಾರೆ. ಗೌರಿಯ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ನವೀನ್ ಕುಮಾರ್ ಮಾತ್ರ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾನೆ. ಎಸ್‌ಐಟಿ ಪೊಲೀಸರು ಫೆ. 18 ರಂದು ನವೀನ್ ಕುಮಾರ್ ನನ್ನು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಬಂಧಿಸಿದ್ದರು. ನವೀನ್ ಕುಮಾರ್ ಸಲ್ಲಿಸಿದ್ದಂತಹ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ 6 ರಂದು ಮುಕ್ತಾಯಗೊಳಿಸಿತ್ತು. ನವೀನ್ ಕುಮಾರ್ ಗೆ ಜಾಮೀನು ನೀಡಿದರೆ ಪ್ರಕರಣದ ತನಿಖೆ ದಾರಿ ತಪ್ಪುತ್ತದೆ. ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಎಸ್ ಐಟಿ ಪರ ವಕೀಲರು ವಾದವನ್ನು ಮಂಡಿಸಿದ್ದಾರೆ.

 

Edited By

Manjula M

Reported By

Manjula M

Comments