ಕಾಂಗ್ರೆಸ್‌ ಹಿರಿಯ ನಾಯಕ ಮಾಜಿ ಸಚಿವ ಗುರುದಾಸ್‌ ಕಾಮತ್‌ ಇನ್ನಿಲ್ಲ

22 Aug 2018 1:22 PM | Crime
372 Report

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್‌ ನಾಯಕ , ಗುರುದಾಸ್‌ ಕಾಮತ್‌ ಅವರು ಅನಾರೋಗದಿಂದ ಇಂದು ಇಹಲೋಕ ತ್ಯಜಿಸಿದ್ದಾರೆ.

ಹೃದಯಾಘಾತಕ್ಕೀಡಾಗಿದ್ದ ಕಾಮತ್‌ ಅವರನ್ನು ಚಾಣಕ್ಯಪುರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗದೆ ರು ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ. ಗುರುದಾಸ್‌ ಕಾಮತ್‌ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಗೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆಯಾದ ಸೋನಿಯಾ ಗಾಂಧಿಯವರು  ಅಂತಿಮ ನಮನವನ್ನು ಸಲ್ಲಿಸಿದ್ದಾರೆ. ಗುರುದಾಸ್ ಕಾಮತ್‌ ಅವರ ನಿಧನ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ. ಅವರ ಸಾವಿಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.

Edited By

Manjula M

Reported By

Manjula M

Comments