ಸಾಲಬಾಧೆ ತಾಳಲಾರದೆ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು  

24 Sep 2018 9:48 AM | Crime
251 Report

ರೈತರ ಸಾಲ ಮನ್ನಾ ಕುರಿತು ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಚರ್ಚೆಯಾದರೂ ಕೂಡ ಯಾವುದು ಇನ್ನೂ ಪರಿಪೂರ್ಣವಾಗಿಲ್ಲ. ಸಾಲ ಮನ್ನಾ ಆಗುತ್ತದೆ ಎಂಬ ನಂಬಿಕೆಯಿಟ್ಟಿರುವ ರೈತರಿಗೂ ಕೂಡ ನಿರಾಸೆಯಿಂದಲೇ ಇದ್ದಾರೆ. ಇದೇ ಬೆನ್ನಲೆ ಸಾಲಭಾದೆ ತಾಳಲಾರದೇ ಒಂದೆ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಈ ಮನಕಲಕುವ  ಘಟನೆ ನಡೆದಿದೆ. ಸುಂಕಾತೊಣ್ಣೂರು ಗ್ರಾಮದ ನಂದೀಶ್ ಎಂಬಾತನ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ. ನಂದೀಶ್ (35), ಪತ್ನಿ ಕೋಮಲಾ (28), ಚಂದನ್ (10), ಮನು (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾವು ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಮಾರು ಐದು ಲಕ್ಷ ಸಾಲ ಮಾಡಿಕೊಂಡಿದ್ದ ಸತೀಶ್, ಎರಡು ಬಾರಿ ಜನತಾ ದರ್ಶನದಲ್ಲಿ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ  ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಮನನೊಂದು ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಈ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

Edited By

Manjula M

Reported By

Manjula M

Comments