ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು..!! ಕೊಲೆಗೆ ಕಾರಣ..?

13 Nov 2018 10:04 AM | Crime
2202 Report

ಜೆಡಿಎಸ್ ಪಕ್ಷದ ನಾಯಕರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಎಸ್.ಸಿ. ಹಾಗು ಎಸ್.ಟಿ. ಘಟಕದ ಪ್ರಧಾನ ಕಾರ್ಯದರ್ಶಿಯಾದ ಆರ್.ಟಿ ರಾಜಗೋಪಾಲ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ನಡೆದಿದೆ. 

ರಾಮನಗರ ಜಿಲ್ಲೆಯ ಪಿ.ರಾಂಪುರ ಗ್ರಾಮದ ನಿವಾಸಿಯಾಗಿದ್ದ ರಾಜಗೋಪಾಲ್ ಕನಕಪುರದಲ್ಲಿ ವಾಸಿಸುತ್ತಿದ್ದರು.. ಇವರು ಸೋಮವಾರ ಸಂಜೆ ಕೆಲವು ವ್ಯಕ್ತಿಗಳ ಜೊತೆ ಚಿಕ್ಕ ಕಾರಣಕ್ಕೆ ಗಲಾಟೆಯನ್ನು ಮಾಡಿಕೊಂಡಿದ್ದರು. ನಂತರ ರಾಜ್‍ಗೋಪಾಲ್ ಕನಕಪುರದ ರಾಮನಗರ ರಸ್ತೆಯಲ್ಲಿನ ಜನನಿ ಆಸ್ಪತ್ರೆ ಬಳಿ ಟೀ ಕುಡಿಯುತ್ತಿದ್ದ ಸಮಯದಲ್ಲಿ ಅಲ್ಲಿಗೆ ಬಂದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ಇರಿದು ಕೊಚ್ಚಿ ರಾಜ ಗೋಪಾಲ್ ಅವರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.  ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡು  ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Edited By

Manjula M

Reported By

Manjula M

Comments