ಧಾರವಾಹಿಯಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟಿ ಆತ್ಮಹತ್ಯೆಗೆ ಶರಣು..!!?

06 Feb 2019 12:58 PM | Crime
3551 Report

ಇತ್ತಿಚಿಗೆ ನಟ ನಟಿಯರು ಆತ್ಮಹತ್ಯಗೆ ಶರಣಾಗುತ್ತಿದ್ದಾರೆ.. ಮೊನ್ನೆ ಮೊನ್ನೆಯಷ್ಟೆ ಸೀರಿಯಲ್ ನಟ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ… ಇದೀಗ ತೆಲುಗು ಟಿವಿ ನಟಿ ನಾಗ ಝಾನ್ಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪವಿತ್ರ ಬಂಧನ ಧಾರಾವಾಹಿಯಲ್ಲಿ ನಟಿಸಿದ್ದು ಝಾನ್ಸಿ ಫೆಬ್ರವರಿ 5 ರಂದು ಹೈದ್ರಾಬಾದ್’ನ ನಗರ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ..

ನಟಿ ನಾಗ ಝಾನ್ಸಿ ರಾತ್ರಿ 9 ಗಂಟೆ ಸುಮಾರಿಗೆ ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣವೇ ಆಕೆಯನ್ನು ಇಲ್ಲಿನ ಗಾಂಧಿ ಆಸ್ಪತ್ರೆಗೆ ಕರೆದುಕೊಮಡು ಹೋಗಲಾಗಿತ್ತು. ಆದರೆ ಅಷ್ಟರಲ್ಲೇ ಆಕೆ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದರು... ಆಕೆ ಆತ್ಮಹತ್ಯೆಗೆ ಶರಣಾಗಿರುವ ಸ್ಥಳದಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಮೊಬೈಲ್ ಫೋನ್ ಕೂಡ ವಶಕ್ಕೆ ಪಡೆದ ಪೊಲೀಸರು ಈ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಆತ್ಮಹತ್ಯೆಗೆ ಲವ್ ಫೆಲ್ಯೂರ್ ಕಾರಣವಿರಬಹುದೆಂದು ಊಹಿಸಲಾಗಿದೆ. ಕಳೆದ 6 ತಿಂಗಳಿನಿಂದ ಸೂರ್ಯ ಎನ್ನುವ ವ್ಯಕ್ತಿಯನ್ನು ನಟಿ ಪ್ರೀತಿಸುತ್ತಿದ್ದು, ಆದರೆ ಆಕೆಯ ಕುಟುಂಬದಲ್ಲಿ ಈ ಬಗ್ಗೆ ಸಾಕಷ್ಟು ವಿರೋಧವಿತ್ತು. ಆಕೆಯ ಗೆಳೆಯ ಹಾಗೂ ಕುಟುಂಬದವರ ನಡುವೆ ಜಗಳವೂ ನಡೆದಿತ್ತು. ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ಕ್ರಮ ಕೈಗೊಳ್ಳಲಿದ್ದಾರೆ.

Edited By

Manjula M

Reported By

Manjula M

Comments