ನಿರ್ಭಯಾ ಅತ್ಯಾಚಾರ  ಅಪರಾಧಿ ಮುಕೇಶ್ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

29 Jan 2020 11:46 AM | Crime
305 Report

ಕ್ಷಮಾಧಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನಡೆ ಪ್ರಶ್ನಿಸಿ ನಿರ್ಭಯಾ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್​ ಸಿಂಗ್​ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಬುಧವಾರ ವಜಾಗೊಳಿಸಿದೆ.

ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿ ಮುಕೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್, ಆದ್ಯತೆ ಮೇರೆಗೆ ವಿಚಾರಣೆಗೆ ಪರಿಗಣಿಸಿತ್ತು. ಬುಧವಾರ ಆತನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಅಶೋಕ್ ಭೂಷಣ್ ಮತ್ತು ಎಎಸ್ ಬೋಪಣ್ಣ ಅವರನ್ನು ಒಳಗೊಂಡ ನ್ಯಾಯಪೀಠ, ಮನವಿಯನ್ನು ವಜಾಗಳಿಸಿತು.

Edited By

venki swamy

Reported By

venki swamy

Comments