ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಕುಲ್‌ಗಾಮ್‌ನ ಹರ್‌ಮಂದ್‌ಗುರಿ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಮಾರ್ಪಡಿಸಿದ ಸೇನಾಪಡೆಗಳು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Comments