ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ!

27 Apr 2020 10:41 AM | Crime
407 Report

ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ.

ರೋಗಿ ನಂಬರ್ 466 ಉಸಿರಾಟದ ತೊಂದರೆಯಿಂದ 50 ವರ್ಷದ ವ್ಯಕ್ತಿ  ಬಳಲುತ್ತಿದ್ದನು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈತ  ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಇಂದು ಈತ ವಿಕ್ಟೋರಿಯಾ ಆಸ್ಪತ್ರೆಯ ವಿಕ್ಟೋರಿಯಾದ ಟ್ರಾಮಾ ಸೆಂಟರ್ ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಕೇಂದ್ರವಾಗಿ ಮಾಡಿರುವುದರಿಂದ ಈ ಆತ್ಮಹತ್ಯೆಯಿಂದ  ಪೊಲೀಸರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಿದ್ದಾರೆ. ಆತ್ಮಹತ್ಯೆಗೆ ಮಡಿಕೊಂಡ ಕಟ್ಟಡದ ಬಳಿ ಬ್ಯಾರಿಕೇಡ್ ಹಾಕಿ ಜನರನ್ನು ಕಂಟ್ರೋಲ್ ಮಾಡುತ್ತಿದ್ದಾರೆ. ವಿವಿ ಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Edited By

venki swamy

Reported By

venki swamy

Comments