ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಇಂದು ಚಿರಂಜೀವಿ ಅಂತ್ಯಕ್ರಿಯೆ

08 Jun 2020 11:08 AM | Crime
449 Report

ಭಾನುವಾರ ಸಂಜೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದರು ಇಂದು ಕನಕಪುರ ರಸ್ತೆಯಲ್ಲಿರುವ ಸಹೋದರ ಧ್ರುವ ಸರ್ಜಾರ ಫಾರ್ಮ್ ಹೌಸಿನಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ.

ತುಮಕೂರಿನ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ನಿರ್ಧರಿಸಿದ್ದರು. ತಾತ ಶಕ್ತಿ ಪ್ರಸಾದ್​ ಅವರ ಸಮಾಧಿ ಪಕ್ಕದಲ್ಲೇ ಚಿರು ಸರ್ಜಾ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎನ್ನಲಾಗಿತ್ತು. ಆದರೆ, ಇದೀಗ ತುಮಕೂರಿನ ಬದಲಾಗಿ ಕನಕಪುರ ರಸ್ತೆಯಲ್ಲಿರುವ ಕಗ್ಗಲೀಪುರದ ನೆಲಗುಳಿ ಗ್ರಾಮದಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್​ ಹೌಸ್​ನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆ ಸ್ಥಳದಲ್ಲಿ ಪೆಂಡಾಲ್, ಆಸನಗಳ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ಸ್ಥಳಕ್ಕೆ ಎಲ್ಲರಿಗೂ ಅವಕಾಶ ನೀಡದೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುವುದು. ಸಿನಿಮಾ ರಂಗದ ಗಣ್ಯರು, ಕುಟುಂಬದವರು ಹೊರತುಪಡಿಸಿ ಉಳಿದವರಿಗೆ ಅವಕಾಶ ಇರುವುದಿಲ್ಲ ಎನ್ನಲಾಗಿದೆ.

Edited By

venki swamy

Reported By

venki swamy

Comments