24 ಗಂಟೆಗಳಲ್ಲಿ 9 ಭಯೋತ್ಪಾದಕರ ಹುಟ್ಟಡಗಿಸಿದ ಸೇನೆ..!
ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇನ್ನೂ ನಾಲ್ವರು ಭಯೋತ್ಪಾದಕರನ್ನು ಹೊಡೆದುರಳಿಸಿದೆ. ಇದರೊಂದಿಗೆ ಕಳೆದ 24 ತಾಸುಗಳಲ್ಲಿ ಒಟ್ಟು ಒಂಭತ್ತು ಉಗ್ರರನ್ನು ಕೋಂದು ಹಾಕಲಾಗಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಫಿಯಾನ್ ಜಿಲ್ಲೆಯ ಪಿಜ್‍ಜೋರಾ ಪ್ರದೇಶದಲ್ಲಿ ಉಗ್ರರು ಅವಿತಿಟ್ಟುಕೊಂಡು ವಿಧ್ವಂಸಕ ಕೃತ್ಯಗಳಿಗೆ ಸಜ್ಜಾಗಿದ್ದಾರೆ ಎಂಬ ಖಚಿತ ಮಾಹಿತಿಯ ಮೆರೆಗೆ ಭದ್ರತಾ ಪಡೆಗಳು ನಿನ್ನೆ ಮಧ್ಯರಾತ್ರಿಯಿಂದ ಆ ಸ್ಥಳವನ್ನು ಸುತ್ತುವರಿದು ಆತಂಕವಾದಿಗಳಿಗೆ ಶೋಧ ನಡೆಸುತ್ತಿತ್ತು. ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಕೂಡ ಗುಂಡು ಹಾರಿಸಿ, ನಾಲ್ವರು ಉಗ್ರರನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಉಗ್ರರ ಗುರುತು ಅಥವಾ ಅವರ ಗುಂಪು ಸಂಬಂಧವನ್ನು ಪೊಲೀಸರು ಬಹಿರಂಗಪಡಿಸಿಲ್ಲ.
Comments