ಅನಂತನಾಗ್ ನಲ್ಲಿ ಉಗ್ರ ದಾಳಿಗೆ ಬಲಿಯಾದ ಸಿಆರ್ಪಿಎಫ್ ಯೋಧ ಹಾಗೂ ಮಗು

26 Jun 2020 4:57 PM | Crime
317 Report

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಸಿಆರ್ಪಿಎಫ್ ಯೋಧ ಮತ್ತು ಅಪ್ರಾಪ್ತ ಬಾಲಕ ಮೃತಪಟ್ಟಿದ್ದಾರೆ.

ಮಧ್ಯಾಹ್ನ 12:05 ಕ್ಕೆ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು ಈ ವೇಳೆ ಬಾಲಕ ಮತ್ತು ಸಿಪಿಆರ್‌ಎಫ್‌ ಯೋಧ ಗಂಭೀರವಾಗಿ ಗಾಯಗೊಂಡರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು' ಎಂದು ಸಿಆರ್‌ಪಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.

Edited By

venki swamy

Reported By

venki swamy

Comments