ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಎನ್ಕೌಂಟರ್ ಗೆ ಬಲಿ

10 Jul 2020 11:26 AM | Crime
236 Report

ಕಾನ್ಪುರ ಸಮೀಪದ ಬಿಕ್ರು ಗ್ರಾಮದಲ್ಲಿ ನಡೆದ ಎಂಟು ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಉತ್ತರ ಪ್ರದೇಶ ಪೊಲೀಸರು ಮಾಹಿತಿ ಖಚಿತಪಡಿಸಿದ್ದಾರೆ.

ನಿನ್ನೆ ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಲ ದೇವಸ್ಥಾನದಲ್ಲಿ ದುಬೆಯನ್ನು ಅಲ್ಲಿನ ಪೊಲೀಸರು ಬಂಧಿಸಿದ ಬಳಿಕ ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಬೆಂಗಾವಲು ವಾಹನ ಮಗುಚಿದೆ. ಈ ನಡುವೆ ಪರಾರಿಯಾಗಲು ಯತ್ನಿಸಿದ ವಿಕಾಸ್‌ ದುಬೆ ಎನ್‌ಕೌಂಟರ್‌ನಿಂದ ಸಾವನ್ನಪ್ಪಿರುವುದಾಗಿ ಉತ್ತರ ಪ್ರದೇಶ ಪೊಲೀಸರು ದೃಢಪಡಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್​ ಕಾನ್ಸ್​ಟೇಬಲ್​ಗಳು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.

Edited By

venki swamy

Reported By

venki swamy

Comments