ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿಅವಘಡ; ಎಂಟು ರೋಗಿಗಳು ಸಜೀವ ದಹನ
ಅಹಮದಾಬಾದ್ ನವರಂಗಪುರ ಪ್ರದೇಶದ ಕೋವಿಡ್-19 ಖಾಸಗಿ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯು ವಾರ್ಡ್ನಲ್ಲಿದ್ದ ಎಂಟು ಮಂದಿ ರೋಗಿಗಳು ಬಲಿಯಾಗಿದ್ದಾರೆ. ನವರಂಗ್ಪುರ ಪ್ರದೇಶದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ರಾತ್ರಿ 2:30ರ ಸುಮಾರಿಗೆ ಸಂಭವಿಸಿದ ಈ ದುರ್ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವೆನ್ನಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು, ಘಟನೆಯಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. 40 ರೋಗಿಗಳನ್ನು ಆಸ್ಪತ್ರೆಯಲ್ಲಿ ರಕ್ಷಿಸಲಾಗಿದೆ ಮತ್ತು ನಗರದ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಆದಷ್ಟೂ ಬೇಗ ಚೇತರಿಕೆ ಕಾಣಲಿ ಎಂದು ಹಾರೈಸಿರುವ ಅವರು ಅಹ್ಮದಾಬಾದ್ ಜಿಲ್ಲಾಡಳಿತವು ಎಲ್ಲಾ ನೆರವು ಒದಗಿಸುತ್ತಿದೆ ಎಂದಿದ್ದಾರೆ.
Comments