ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ ನಡಸಿದ್ದು ದಾಖಲೆಗಳಿಗಾಗಿ ಶೋಧ ನಡೆಸುತ್ತಿದೆ. ಪುಲಿಕೇಶೀನಗರದ ಕೋಲ್ಸ್ ಪಾರ್ಕ್ ಬಳಿ ಇರುವ ಬೇಗ್ ಮನೆಯಲ್ಲಿ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್ ಖಾನ್ನಿಂದ ಸುಮಾರು 200 ಕೋಟಿ ರೂ. ಗೂ ಹೆಚ್ಚು ಹಣ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಗುರುತರ ಆರೋಪ ಎದುರಿಸುತ್ತಿದ್ದಾರೆ. ಸಿಬಿಐ ಭಾನುವಾರ ಮಾಜಿ ಮಂತ್ರಿ, ಶಿವಾಜಿ ನಗರದ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಬಂಧಿಸಿದೆ. ರೋಷನ್ ಬೇಗ್ ಅವರನ್ನು ಬಂಧಿಸಿದ ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಿದ್ದಾರೆ.
Comments