ಫುಟ್ಪಾತ್ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದು 15 ಮಂದಿ ದುರ್ಮರಣ

19 Jan 2021 12:22 PM | Crime
252 Report

ಫುಟ್ಪಾತ್ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್ ಹರಿದು 15 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಕಬ್ಬು ತುಂಬಿದ ಟ್ರಾಕ್ಟರ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಫುಟ್​ಪಾತ್​ ಮೇಲೆ ಚಲಿಸಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದಿದೆ. 18ಕ್ಕೂ ಹೆಚ್ಚು ಜನ ಅಲ್ಲಿ ಮಲಗಿದ್ದು ಅದರಲ್ಲಿ 15 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರು ಗಂಭೀರ ಗಾಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಸಾವನ್ನಪ್ಪಿದ್ದ ಎಲ್ಲರೂ ರಾಜಸ್ಥಾನ ಮೂಲದ ಕಾರ್ಮಿಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರತಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಸೂರತ್ ನಲ್ಲಿ ನಡೆದ ಟ್ರಕ್ ಅಪಘಾತ  ಒಂದು ದುರಂತ. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾಥಿ‍‍‍‍ಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Edited By

venki swamy

Reported By

venki swamy

Comments