ಅಮೆರಿಕದಲ್ಲಿ ಗಾಂಧೀಜಿಯ ಕಂಚಿನ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು..!
ಅಮೆರಿಕದ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಇದಕ್ಕೆ ಭಾರತೀಯ ಮೂಲದ ಅಮೆರಿಕನ್ನರಿಂದ ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
'ಉತ್ತರ ಕ್ಯಾಲಿಫೋರ್ನಿಯಾದ ಡೇವಿಸ್ ನಗರದ ಸೆಂಟ್ರಲ್ ಪಾರ್ಕ್‌ನಲ್ಲಿರುವ ಗಾಂಧೀಜಿ ಅವರ 6 ಅಡಿ ಎತ್ತರದ, 294 ಕೆ.ಜಿ ತೂಕದ ಕಂಚಿನ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು, ಪ್ರತಿಮೆಯ ಪಾದ ಮತ್ತು ಮುಖ ಭಾಗಕ್ಕೆ ಹಾನಿಯನ್ನುಂಟು ಮಾಡಲಾಗಿದೆ' ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಅಮೆರಿಕ ಸರ್ಕಾರ ಸಮಗ್ರ ತನಿಖೆ ನಡೆಸಿ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಸಾನ್ ಫ್ರಾನ್ಸಿಸ್ಕೊದಲ್ಲಿರುವ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಪ್ರತ್ಯೇಕವಾಗಿ ಪ್ರಕರಣವನ್ನು ತೆಗೆದುಕೊಂಡು ಸಿಟಿ ಆಫ್ ಡೇವಿಸ್ ಮತ್ತು ಸ್ಥಳೀಯ ಜಾರಿ ನಿರ್ದೇಶನಾಲಯ ಅಧಿಕಾರಿಗಳೊಂದಿಗೆ ತನಿಖೆ ನಡೆಸಲು ಮುಂದಾಗಿದೆ.
Comments