ಮದುವೆ ಬಳಿಕ ರಾಧಿಕ ಪಂಡಿತ್ ಮೊದಲ ಸಿನಿಮಾ ಶುರು..!!

21 Jul 2017 10:10 AM | Entertainment
638 Report

ರಾಧಿಕ ಪಂಡಿತ್ ಮದುವೆಯ ಬಳಿಕ ಯಾವ ಚಿತ್ರ ಮಾಡುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿತ್ರದ ಕಥೆ ತುಂಬ ಇಷ್ಟ ಆಗಿದ್ದು, ರಾಧಿಕ ಈ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ರಾಧಿಕ ಪಂಡಿತ್ ಅವರ ಹೊಸ ಸಿನಿಮಾಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹಾಕಲಿದ್ದಾರಂತೆ.ತಮಿಳಿನ ಖ್ಯಾತ ನಿರ್ದೇಶಕರಾದ ಮಣಿರತ್ನಂ ಅವರ ಜೊತೆ ಕೆಲಸ ಮಾಡಿದ್ದ ನಿರ್ದೇಶಕಿ ಪ್ರಿಯಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದೆ ತಮಿಳಿನಲ್ಲಿ ಅವರು ಮೂರು ಚಿತ್ರವನ್ನು ನಿರ್ದೇಶಿಸಿದ್ದಾರೆ.

ರಾಧಿಕ ಅವರ ಹೊಸ ಸಿನಿಮಾದ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಆದರೆ ಅವರು ಈ ಹಿಂದೆ ಯಾವ ರೀತಿಯ ಸಿನಿಮಾ ಮಾಡುತ್ತಿದ್ದರೋ ಅದೇ ಮಾದರಿಯಲ್ಲಿ ಈ ಚಿತ್ರ ಕೂಡ ಇರಲಿದೆಯಂತೆ.

Edited By

Shruthi G

Reported By

Shruthi G

Comments