ಯ್ಯೂಟ್ಯೂಬ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿರುವ ಕನ್ನಡದ ಆ ಹಾಡು ಯಾವುದು ..?

16 Nov 2017 1:08 PM | Entertainment
1406 Report

'ಬೆಳಗೆದ್ದು ಯಾರ ಮುಖವಾ ನಾನು ನೋಡಿದೆ...ಅಂದಾನೋ ಅದೃಷ್ಟನೋ ಮುಂದೆ ಕುಂತಿದೆ'...... ವರ್ಷಗಳು ಕಳೆದರೂ, ಮತ್ತಷ್ಟು ಮಧುರವಾದ ಹಾಡುಗಳು ಬಂದರೂ, ಈ ಹಾಡಿನ ಕ್ರೇಜ್ ಮಾತ್ರ ಇನ್ನು ಕಮ್ಮಿಯಾಗಿಲ್ಲ.

 ಹೌದು, 'ಕಿರಿಕ್ ಪಾರ್ಟಿ' ಚಿತ್ರದ ಈ ಹಾಡು ಯ್ಯೂಟ್ಯೂಬ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಒಂದು ವರ್ಷದಲ್ಲಿ ಸುಮಾರು 4 (40,067,539) ಕೋಟಿಗೂ ಅಧಿಕ ಬಾರಿ ಈ ಹಾಡನ್ನ ಯ್ಯೂಟ್ಯೂಬ್ ನಲ್ಲಿ ನೋಡಿದ್ದಾರೆ. ಈ ಮೂಲಕ ಕನ್ನಡದ ಹಾಡೊಂದು 40 ಮಿಲಿಯನ್ ವೀಕ್ಷಕರನ್ನ ಹೊಂದಿರುವುದು ಇದೇ ಮೊದಲು. ಅಂದ್ಹಾಗೆ, ಈ ಹಾಡಿಗೆ ಧನಂಜಯ ರಂಜನ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ನವೆಂಬರ್ 25, 2016 ರಂದು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಲಾಗಿತ್ತು. ಇನ್ನು 10 ದಿನ ಆದ್ರೆ, ಈ ಹಾಡಿಗೆ ಒಂದು ವರ್ಷದ ಸಂಭ್ರಮ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ, ಸಂಯುಕ್ತ ಹೆಗಡೆ ಸೇರಿದಂತೆ ಹಲವರು ಅಭಿನಯಿಸಿದ್ದರು.

Edited By

Hema Latha

Reported By

Madhu shree

Comments