ಅಂಜಲಿ ಪುತ್ರ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ಆಜ್ಞೆ

23 Dec 2017 5:13 PM | Entertainment
725 Report

ಪುನೀತ್ ಅಭಿನಯದ ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ. ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅರ್ಜಿ ವಿಚಾರಣೆಯನ್ನು ನಡೆಸಿದ ಕೋರ್ಟ್ ಅಂಜನಿಪುತ್ರ ಸಿನಿಮಾ ಪ್ರದರ್ಶನ ಮಾಡದಂತೆ ಆದೇಶಿಸಿ ಜ. 2ಕ್ಕೆ ವಿಚಾರಣೆ ಮುಂದೂಡಿದೆ.

“ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ” ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Edited By

Shruthi G

Reported By

Madhu shree

Comments