ಹಿರಿಯ ನಟ,ನಿರ್ಮಾಪಕ,ನಿರ್ದೇಶಕ ಕಾಶಿನಾಥ್‌ ಇನ್ನಿಲ್ಲ

18 Jan 2018 9:54 AM | Entertainment
505 Report

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕಾಶಿನಾಥ್‌ ಇನ್ನಿಲ್ಲ. ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾಶಿನಾಥ್‌ ಇಂದು ವಿಧಿವಶರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಾಶಿನಾಥ್‌ 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಗರದ ಶ್ರೀಶಂಕರ್‌ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕಾಶಿನಾಥ್‌ ಕೊನೆಯುಸಿರುಳೆದಿದ್ದಾರೆ.ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ್ದವರು ಕಾಶಿನಾಥ್‌. ಉಪೇಂದ್ರ, ಮನೋಹರ್, ಸುನೀಲ್‍ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕಾಶಿನಾಥ್‌ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು.ಚಿತ್ರರಂಗದಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಅವರು ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

Edited By

Shruthi G

Reported By

Shruthi G

Comments