ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಸೆಟ್ಟೇರಲಿದೆ 'ಬಕಾಸುರ' ಸಿನಿಮಾ

23 Mar 2018 10:54 AM | Entertainment
517 Report

ಪದ್ಮಾವತಿ ಪಿಕ್ಚರ್ಸ್ ಲಾಂಛನದಲ್ಲಿ ರೋಹಿತ್ ಹಾಗೂ ತಂಡದವರು ನಿರ್ಮಿಸಿರುವ `ಬಕಾಸುರ` ಚಿತ್ರದ ಟ್ರೇಲರ್ ಯೂಟ್ಯೂಬ್ ನಲ್ಲಿ ಸದ್ದು ಮಾಡ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ನಾಯಕರಾಗಿ ಆರ್.ಜೆ.ರೋಹಿತ್ ನಟಿಸಿದ್ದಾರೆ.

ಮೊದಲ ಬಾರಿಗೆ ರವಿಚಂದ್ರನ್ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ನವನೀತ್ ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಹೆಚ್ಚಿದೆ. ಈಗಾಗಲೇ ಸಿನಿಮಾದ ಕೆಲಸಗಳು ಮುಗಿಯುವ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರ ರಿಲೀಸ್ ಆಗಲಿದೆ. ಅವಿನಾಶ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ವೆಂಕಿ ಯುಡಿವಿ ಸಂಕಲನ ಹಾಗೂ ಜಾಗ್ವಾರ್ ಸಣ್ಣಪ್ಪ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Edited By

Shruthi G

Reported By

Madhu shree

Comments