ಕೊನೆಗೂ ಜೈಲು ಶಿಕ್ಷೆಗೆ ಗುರಿಯಾದ ಸಲ್ಮಾನ್ ಖಾನ್

05 Apr 2018 2:53 PM | Entertainment
417 Report

ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಲ್ಮಾನ್ ಖಾನ್ ದೋಷಿ ಎಂದು ಜೋದ್ಪುರ ಸಿಜೆಎಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು. ವನ್ಯಜೀವಿ ಕಾಯ್ದೆ 51ರಡಿ ಸಲ್ಮಾನ್ ಖಾನ್ ಗೆ 2ರಿಂದ 6 ವರ್ಷ ಶಿಕ್ಷೆಯಾಗಬಹುದೆಂದು ಅಂದಾಜಿಸಲಾಗಿತ್ತು.

 ಸರ್ಕಾರಿ ಪರ ವಕೀಲರು 6 ವರ್ಷ ಜೈಲು ಶಿಕ್ಷೆ ನೀಡುವಂತೆ ವಾದ ಮಂಡಿಸಿದ್ದರು. ವಾದ-ವಿವಾದ ಆಲಿಸಿದ ನ್ಯಾಯಮೂರ್ತಿಗಳು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಮೂರಕ್ಕಿಂತ ಕಡಿಮೆ ವರ್ಷ ಜೈಲು ಶಿಕ್ಷೆಯಾಗಿದ್ದರೆ ಸಲ್ಮಾನ್ ಖಾನ್ ಜಾಮೀನು ಅರ್ಜಿ ಸಲ್ಲಿಸಬಹುದಿತ್ತು. ಆದ್ರೆ 5 ವರ್ಷಗಳ ಜೈಲು ಶಿಕ್ಷೆಯಾಗಿರುವುದ್ರಿಂದ ಸಲ್ಮಾನ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಮಧ್ಯೆ ಪೊಲೀಸರು ಸಲ್ಮಾನ್ ಖಾನ್ ರನ್ನು ವಶಕ್ಕೆ ಪಡೆದಿದ್ದಾರೆ. ಸಲ್ಮಾನ್ ಖಾನ್ ಗೆ ಶಿಕ್ಷೆ ಪ್ರಮಾಣ ಪ್ರಕಟವಾಗ್ತಿದ್ದಂತೆ ಸಹೋದರಿ ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ.

 

Edited By

Shruthi G

Reported By

Madhu shree

Comments