ಈ ಬಾರಿಯ ಬಿಗ್ ಬಾಸ್ ನಲ್ಲಿ ನಿವೇದಿತಾ ಸ್ಥಾನವನ್ನು ಯಾರು ತುಂಬುತ್ತಾರೆ ಗೊತ್ತಾ.. !

21 Jul 2018 11:32 AM | Entertainment
349 Report

ಕನ್ನಡದಲ್ಲಿ ಬಿಗ್ ಬಾಸ್ 6ನೇ ಸೀಸನ್ ಶುರುವಾಗುತ್ತಿದೆ. ಈ ಬಾರಿಯ ಬಿಗ್ ಬಾಸ್ ನಲ್ಲಿ ಯಾರಿಗೆಲ್ಲಾ ಚಾನ್ಸ್ ಸಿಗಲಿದೆ ಎಂಬುದು ಬಿಗ್ ಬಾಸ್ ವೀಕ್ಷಕರೆಲ್ಲರಿಗೂ ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ. ಈಗಾಗಲೇ ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಸೀಸನ್ 6ರ ಪ್ರೋಮೋ ಅನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಈ ಬಾರಿಯ ಬಿಗ್ ಬಾಸ್ ಸೀಸನ್ 6ರಲ್ಲಿ ಯಾರೆಲ್ಲಾ ಅಭ್ಯರ್ಥಿಗಳು ಬಿಗ್ ಬಾಸ್ ಮನೆಯ ಒಳಗೆ ಹೋಗಲಿದ್ದಾರೆ ಎಂಬುದಕ್ಕೆ ಒಂದಷ್ಟು ಅಭ್ಯರ್ಥಿಗಳ ಹೆಸರು ಕೂಡ ಈಗಾಗಲೇ ಕೇಳಿ ಬರುತ್ತಿದೆ. ಈ ನಡುವೆ ಕಾರ್ಯಕ್ರಮದ ವೀಕ್ಷಕರು ಈಗಾಗಲೇ ಯಾರೆಲ್ಲಾ ಬಿಗ್ ಬಾಸ್ ಮನೆಗೆ ಬರಬೇಕು ಎಂದು ಸಲಹೆಗಳನ್ನು ನೀಡಿದ್ದಾರೆ.ಈಗಾಗಲೇ ಕಾರ್ಯಕ್ರಮದ ಆಯೋಜಕರು ಬಿಗ್ ಬಾಸ್ ಮನೆಗೆ ಯಾರನ್ನು ಆಯ್ಕೆ ಮಾಡಬೇಕೆಂದು ಕಸರತ್ತು ನಡೆಸುತ್ತಿದ್ದಾರೆ. ಈ ಬಾರಿಯ ಬಿಗ್ ಬಾಸ್ ಸೀಸನ್ ನಲ್ಲಿ ಒಂದಷ್ಟು ಜನರು ಬರಬೇಕು ಎಂದು ಹೇಳುತ್ತಿದ್ದಾರೆ. ಕಳೆದ ಬಾರಿ ಡಬ್ ಸ್ಮ್ಯಾಶ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ನಿವೇದಿತಾ ಗೌಡ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು.ಈ ಬಾರಿ ಡಬ್ ಸ್ಮ್ಯಾಶ್ ಖೋಟಾದಲ್ಲಿ ಈ ಬಾರಿ ಯಾರು ಬಿಗ್ ಬಾಸ್ ಮನೆಗೆ ಹೋಗುತ್ತಾರೆ ಎಂಬುದು ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ. ಅಲ್ಲದೇ ಈ ಕುರಿತು ಸಾಕಷ್ಟು ಚರ್ಚೆಯನ್ನೂ ಹುಟ್ಟು ಹಾಕಿದೆ. ಡಬ್ ಸ್ಮ್ಯಾಶ್ ನಲ್ಲಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಅಲ್ಲು ರಘು ಹಾಗೂ ಸುಶ್ಮಿತಾ ಜೋಡಿಯಲ್ಲಿ ಒಬ್ಬರು ಬಿಗ್ ಬಾಸ್ ಮನೆಗೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಅದರಲ್ಲೂ ಅಲ್ಲು ರಘುಗೆ ಈ ಬಾರಿ ಬಿಗ್ ಬಾಸ್ ಮನೆಗೆ ಪಾಸ್ ಸಿಗಲಿದೆ ಅಂತ ಹೇಳಲಾಗುತ್ತಿದೆ.  ನಿವೇದಿತಾ ಗೌಡ ಜಾಗಕ್ಕೆ ಈ ಬಾರಿ ಅಲ್ಲು ರಘು ಹೋಗುವ ಸಾಧ್ಯತೆ ಇದ್ದು, ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರಂತೆ. ಏನಾಗುವುದೋ ಎಂದು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments