ರಿಷಬ್ ಶೆಟ್ಟಿಯ ಕಾಸರಗೋಡು ಸರ್ಕಾರಿ ಶಾಲೆ ಆ. 23 ಕ್ಕೆ ಪ್ರಾರಂಭ

13 Aug 2018 5:36 PM | Entertainment
295 Report

ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಿತ್ರ 'ಸಹಿಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ' ಸಿನಿಮಾ ಆ.23 ಕ್ಕೆ ತೆರೆ ಮೇಲೆ ಬರಲು ಸಿದ್ದವಾಗಿದೆ

ಕಾಸರಗೋಡಿನ ಸರ್ಕಾರಿ ಶಾಲೆಯ ಸುತ್ತ ಸಾಗುವ ಈ ಚಿತ್ರದ ಹಾಡುಗಳು ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಅನಂತ್‌ನಾಗ್  ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. 'ಕಿರಿಕ್ ಪಾರ್ಟಿ' ನಂತರ ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ನಿರ್ದೇಶಕರಾಗಿಪ್ರೇಕ್ಷಕರ ಮುಂದೆ ಮತ್ತೊಮ್ಮೆಬರುತ್ತಿದ್ದಾರೆ. ರಿಷಬ್ ಶೆಟ್ಟಿ ಫಿಲಮ್ಸ್ ಮೂಲಕ ನಿರ್ಮಾಪಕ ಜಯಣ್ಣ ಈ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ. ಮೊದಲ ವಾರದಲ್ಲೇ 75 ರಿಂದ 100 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಈ ಸಿನಿಮಾ ಯಾವ ರೀತಿಯಲ್ಲಿ ಸಕ್ಸಸ್ ಕಾಣುತ್ತದೆ ಅನ್ನೋದನ್ನ ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments