ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ನಟ ದರ್ಶನ್ ಅವರ  Exclusive Photo ಇಲ್ಲಿದೆ ನೋಡಿ..!

25 Sep 2018 2:01 PM | Entertainment
839 Report

ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಹೊರವಲಯದ ಹಿನಕಲ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದ್ದು, ನಟ ದರ್ಶನ್ ಸೇರಿದಂತೆ ನಾಲ್ಕು ಜನರಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಅಪಘಾತದಲ್ಲಿ ನಟ ದರ್ಶನ್ ಅವರ ಬಲಗೈ ಮುರಿದುಕೊಂಡಿದ್ದು, ಚಿಕಿತ್ಸೆಗಾಗಿ ದರ್ಶನ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟ ದರ್ಶನ್ ಅವರ  ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ತಾಯಿ ಮೀನ ತೂಗುದೀಪ, ನಟ ಸೃಜನ್ ಲೋಕೇಶ್ ಸೇರಿದಂತೆ ಹಲವರು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಆಗಮಿಸಿ, ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಅಭಿಮಾನಿಗಳು ದರ್ಶನ್ ಅವರು ಬೇಗ ಗುಣಮುಖರಾಗಲಿ ಎಂದು ದೇವರ ಬಳಿ ಬೇಡಿಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿರುವ ದರ್ಶನ್ ಅವರ ಎಕ್ಸ್’ಕ್ಯ್ಲೂಸಿವ್ ಪೋಟೋ ವೈರಲ್ ಆಗಿದೆ.

Edited By

Manjula M

Reported By

Manjula M

Comments