ರಾತ್ರೋ ರಾತ್ರಿ ಮಂಡ್ಯದ ಬಾಡಿಗೆ ಮನೆ ಖಾಲಿ ಮಾಡಿದ ಸ್ಯಾಂಡಲ್ ವುಡ್’ನ ಪದ್ಮಾವತಿ..!

03 Dec 2018 10:00 AM | Entertainment
271 Report

ಸ್ಯಾಂಡಲ್ ವುಡ್ ನ ರೆಬಲ್ ಸ್ಟಾರ್, ಕಲಿಯುಗದ ಕರ್ಣ ಅಂಬರೀಶ್ ನಿಧನದ ಹಿನ್ನಲೆಯಲ್ಲಿ  ಅಂತಿಮ ದರ್ಶನಕ್ಕೆ ಬಾರದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ರಾತ್ರೋ ರಾತ್ರಿ ಮಂಡ್ಯದಲ್ಲಿರುವ ಬಾಡಿಗೆ ಮನೆ ಖಾಲಿ ಮಾಡಿದ್ದಾರೆ ಎನ್ನಲಾಗಿದೆ. ಮಂಡ್ಯದ ವಿದ್ಯಾನಗರದಲ್ಲಿರುವ ಬಾಡಿಗೆ ಮನೆಯನ್ನು ಭಾನುವಾರ ತಡರಾತ್ರಿ ಖಾಲಿ ಮಾಡಿದ್ದಾರೆ.. ಎರಡು ಲಾರಿಗಳಲ್ಲಿ ಮನೆಯಲ್ಲಿದ್ದ ವಸ್ತುಗಳನ್ನು ಸಾಗಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ ಎರಡು ಗಂಟೆಯವರೆಗೆ ಮನೆಯಲ್ಲಿದ್ದ ವಸ್ತುಗಳನ್ನು ತುಂಬಿಕೊಂಡು ಮನೆ ಖಾಲಿ ಮಾಡಿಕೊಂಡು ಹೋಗಿದ್ದಾರೆ. ರಮ್ಯಾ ಮನೆ ಮುಂದೆ ಪೊಲೀಸರಿಂದ ಬಿಗಿ ಬಂದೊಬಸ್ತ್ ವ್ಯವಸ್ಥೆಯನ್ನು ಮಾಡಲಾಗಿತ್ತು.. ರಾತ್ರೋರಾತ್ರಿ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದರಿಂದ ರಮ್ಯಾಮನೆ ಖಾಲಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ರಮ್ಯಾ, ಮಂಡ್ಯದ ಮನೆ ಖಾಲಿ ಮಾಡಿದ್ದಾರೆ.

Edited By

Manjula M

Reported By

Manjula M

Comments