ನಕ್ಸಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಪ್ರಜ್ವಲ್ ದೇವರಾಜ್

18 Dec 2018 4:30 PM | Entertainment
245 Report

ಡೈನಾಮಿಕ್ ಪ್ರಿನ್ಸ್ ಎಂದೇ ಹೆಸರು ಪಡೆದಿರುವ ಪ್ರಜ್ವಲ್ ದೇವರಾಜ್ ಫಣೀಶ್ ನಿರ್ದೇಶನದ ರುದಿರ ಚಿತ್ರದಲ್ಲಿ ಮೊದಲ ಬಾರಿಗೆ ನಕ್ಸಲ್ ಪಾತ್ರದಲ್ಲಿ ತೆರೆ ಮೇಲೆ  ಕಾಣಿಸಿಕೊಳ್ಳುತ್ತಿದ್ದಾರೆ.ರುದಿರ ಅಂದರೆ ರಕ್ತ ಎಂದರ್ಥ. ಇನ್ನು ನಕ್ಸಲ್ ಚಳವಳಿಯು ಈ ಚಿತ್ರದಲ್ಲಿದೆ.  ಯಾವ ಐಡಿಯಾಲಜಿಗಳೂ ಕೂಡ ಶಾಶ್ವತ ಅಲ್ಲ. ಒಂದು ಕಾಲಕ್ಕೆ ಪ್ರಸ್ತುತವಾಗಿದ್ದ ಐಡಿಯಾಲಜಿ ಮುಂದೆ ಅಪ್ರಸ್ತುತ ಆಗಬಹುದು ಎಂಬುದನ್ನೇ ಈ ಚಿತ್ರದಲ್ಲಿ ನಿರ್ದೇಶಕರು ತಿಳಿಸಲಿದ್ದಾರೆ

ಈ ಹಿಂದೆ ರುದಿರ ಚಿತ್ರದಲ್ಲಿ ವಸಿಷ್ಠ ಸಿಂಹ ನಾಯಕನಾಗಿ ನಟಿಸುತ್ತಿದ್ದಾರೆ ಎಂದು ಹೇಳುತ್ತಿದ್ದರು.. ಆದರೆ ಕೆಲವು ಕಾರಣಗಳಿಂದ ಚಿತ್ರ ನಿಂತು ಹೋಗಿತ್ತು. ಇದೀಗ ಮತ್ತೆ ಪ್ರಜ್ವಲ್ ದೇವರಾಜ್ ನಟನೆಯಲ್ಲಿ ನಿರ್ಮಾಣವಾಗುತ್ತಿದೆ. ಪ್ರಜ್ವಲ್ ದೇವರಾಜ್ ಅವರ ಇಮೇಜ್ ಮತ್ತು ಅವರ ಮ್ಯಾನರಿಸಂಗಳನ್ನು ಗಮನದಲ್ಲಿಟ್ಟುಕೊಂಡು ಫಣೀಶ್ ಈ ಚಿತ್ರದ ಸ್ಕ್ರಿಪ್ಟ್ ನಲ್ಲಿ ಕೊಂಚ ಬದಲಾವಣೆಯನ್ನು ಮಾಡಿಕೊಂಡಿದ್ದಾರೆ. ನಿರ್ದೇಶಕರೇ ಭಾಗ್ಯತನಯ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಧೆ ಆರಂಭಿಸಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.

Edited By

Manjula M

Reported By

Manjula M

Comments