ಸ್ಯಾಂಡಲ್ವುಡ್’ಗೆ ಎಂಟ್ರಿ ಕೊಡಲಿರುವ ‘ಕಲಾವಿದ’ನ ಮತ್ತೊಂದು ಕುಡಿ..!!

28 Feb 2019 10:54 AM | Entertainment
249 Report

ಸ್ಯಾಂಡಲ್’ವುಡ್ ಅನ್ನು ಒಂದು ಕಾಲದಲ್ಲಿ ಆಳಿದ ನಟ ನಟಿಯರ ಮಕ್ಕಳು ಇದೀಗ ಸ್ಯಾಂಡಲ್ ವುಡ್ ಎಂಟ್ರಿ ಕೊಡಲಿದ್ದಾರೆ, ರಾಘವೇಂದ್ರ ರಾಜ್ ಕುಮಾರ್, ದೇವರಾಜ್, ರಾಮ್ ಕುಮಾರ್, ಅರ್ಜುನ್ ಸರ್ಜಾ, ಶಶಿಕುಮಾರ್, ಇನ್ನೂ ಅನೇಕ ನಟ ನಟಿಯರ ಮಕ್ಕಳು ಈಗಾಗಲೇ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.. ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ರೀತಿಯ ಸಿನಿಮಾಗಳಿಗೆ ನಾಂದಿ ಹಾಡಿದ ರವಿಚಂದ್ರನ್ ಮಗ ಕೂಡ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ.. ಈಗಾಗಲೇ ರವಿಚಂದ್ರನ್ ಮೊದಲ ಮಗ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.. ಇದೀಗ ಅವರ ಎರಡನೇ ಮಗ ಕೂಡ ಬಣ್ಣ ಹಚ್ಚಲು ಸಿದ್ದರಾಗಿದ್ದಾರೆ....

ಎಸ್.. ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಬೆಳ್ಳಿತೆರೆ ಎಂಟ್ರಿ ಕೊಡಲು ಸಿದ್ದರಾಗಿದ್ದಾರೆ. ವಿಕ್ರಮ್ ಇದೇ ವರ್ಷ ಹೀರೋ ಆಗಿ ಬೆಳ್ಳಿತೆರೆಗೆ ಎಂಟ್ರಿ ಕೊಡುವುದು ಕನ್ಫರ್ಮ್ ಆಗಿದೆ.. ನಿರ್ದೇಶಕ ಸಹನಾ ಮೂರ್ತಿ ಹಾಗೂ ವಿಕ್ರಮ್ ರವಿಚಂದ್ರನ್ ಕಾಂಬಿನೇಷನ್’ನ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

ವಿಕ್ರಮ್ ಮೊದಲ ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.. ಮಾರ್ಚ್ 1ರಿಂದ ಹಾಡುಗಳ ಧ್ವನಿ ಮುದ್ರಣ ಕೆಲಸ ಕೂಡ ಪ್ರಾರಂಭವಾಗುತ್ತಿದೆ. ಮಾರ್ಚ್ 1ರನಂತರ ಚಿತ್ರದ ಮುಹೂರ್ತ ಹಾಗೂ ಚಿತ್ರೀಕರಣಕ್ಕೆ ಡೇಟ್ ಫಿಕ್ಸ್ ಆಗುವ ಸಾಧ್ಯತೆಗಳಿವೆ ಎಂದು ಚಿತ್ರತಂಡ ತಿಳಿಸಿದೆ.. ಆದರೆ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿಲ್ಲ.

ಗೌರಿ ಎಂಟರ್‌ಟೈನರ್ ಮೂಲಕ ಸೋಮಣ್ಣ ಹಾಗೂ ಸುರೇಶ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ., ಸಂತೋಷ್ ರೈ ಪಾತಾಜೆಯವರ ಕ್ಯಾಮೆರಾ ಕೈ ಚಳಕವಿದೆ.. ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಸಾಹಸ ಈ ಚಿತ್ರಕ್ಕಿದೆ. ವಿಕ್ರಮ್ ರವಿಚಂದ್ರನ್ ಸ್ಯಾಂಡಲ್ ವುಡ್ ನಲ್ಲಿ ಭರವಸೆಯ ನಾಯಕನಾಗುತ್ತಾನ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments