ಉತ್ತರ ಕರ್ನಾಟಕದ ಮಂದಿಗೆ ನೆರವಾಗಲು ಮುಂದಾದ ನಟ ದರ್ಶನ್

08 Aug 2019 11:04 AM | Entertainment
323 Report

ಸದ್ಯ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ... ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತ ವ್ಯಸ್ತಗೊಂಡಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಹಾಗೂ ಭಾರಿ ಮಳೆ ಉಂಟಾಗಿದೆ.. ಅದರಲ್ಲಿಯೂ, ಗ್ರಾಮಾಂತರ ಪ್ರದೇಶದ ಜನರ ಪರಿಸ್ಥಿತಿಯಂತೂ ನಿಜಕ್ಕೂ ಶೋಚನೀಯವಾಗಿ ಬಿಟ್ಟಿದೆ.. ಇದೀಗ ಭಾರಿ ಮಳೆಗೆ ಮನೆ ಆಸ್ತಿ ಕಳೆದುಕೊಂಡು ಸಂಕಷ್ಟದಲ್ಲಿರುವ ಜನರ ನೆರವಿಗೆ ನಟ ದರ್ಶನ್ ಮುಂದೆ ಬಂದಿದ್ದಾರೆ.

ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದ ಜನ ಸಂಕಷ್ಟದಲ್ಲಿದ್ದು ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೆರವಿಗೆ ಮನವಿ ಮಾಡಿದ್ದಾರೆ. ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿದ್ದು ಅಲ್ಲಿನ ಜನರಿಗೆ ಆಸರೆಯಾಗುವುದು ಪ್ರತಿ ಮನುಷ್ಯನ ಕರ್ತವ್ಯವಾಗಿದೆ ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಮಾಡಬೇಕೆಂದು ದರ್ಶನ್ ಮನವಿಯನ್ನು ಮಾಡಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಗದಗ, ಚಿಕ್ಕೋಡಿ ಸೇರಿದಂತೆ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ನೆರೆ ಹಾವಳಿ ಉಂಟಾಗಿದೆ. ಜನ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಅಗತ್ಯ ನೆರವನ್ನು ನೀಡುವಂತೆ ದರ್ಶನ್ ಮನವಿ ಮಾಡಿದ್ದಾರೆ.ಜನರಿಗೆ ಅಗತ್ಯವಾದ ವಸ್ತುಗಳನ್ನು ಪೂರೈಸಲು ದರ್ಶನ್ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದಕ್ಕೆ ದರ್ಶನ್ ಆಗಿಂದಾಗೆ ಅಭಿಮಾನಿಗಳಿಗೆ ಇಷ್ಟವಾಗುವುದು.

Edited By

Manjula M

Reported By

Manjula M

Comments