ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್..!!

27 Aug 2019 1:29 PM | Entertainment
326 Report

ಚಂದನವನದ ಬಹು ಬೇಡಿಕೆಯ ನಟರಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಒಬ್ಬರು..ಅಪ್ಪುವಿಗೆ ತನ್ನದೆ ಆದ ಫ್ಯಾನ್ಸ್ ಫಾಲೋವರ್ಸ್ ಹೆಚ್ಚಾಗಿಯೆ ಇದ್ದಾರೆ.  ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಸದ್ಯ ಪುನೀತ್ ರಾಜ್ ಕುಮಾರ್ ಅಭಿನಯದ 'ಯುವರತ್ನ' ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಇದರ ನಡುವೆ  ಮತ್ತೊಂದು ಸಿನಿಮಾದ ಶೂಟಿಂಗ್ ಕೂಡ ಪ್ರಾರಂಭವಾಗುತ್ತಿದೆ.

'ರಾಜಕುಮಾರ' ಸಿನಿಮಾದ ನಂತರ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ 'ಯುವರತ್ನ'  ಸಿನಿಮಾವು ಭಾರಿ ನಿರೀಕ್ಷೆಯನ್ನು ಮೂಡಿಸಿದೆ. 'ಯುವರತ್ನ' ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. 'ಭರ್ಜರಿ' ಚೇತನ್ ಕುಮಾರ್ ನಿರ್ದೇಶನದ 'ಜೇಮ್ಸ್' ಚಿತ್ರದಲ್ಲಿ ಪುನೀತ್ ನಟಿಸಲಿದ್ದಾರೆ..  ಬಹಳ ಹಿಂದೆಯೇ 'ಜೇಮ್ಸ್' ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದರೂ, ಚಿತ್ರೀಕರಣ ಆರಂಭವಾಗಿರಲಿಲ್ಲ. 'ಯುವರತ್ನ' ಚಿತ್ರೀಕರಣ ಮುಗಿಯುತ್ತಿದ್ದಂತೆ 'ಜೇಮ್ಸ್' ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸದ್ಯ ಯುವರತ್ನ ಸಿನಿಮಾಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ತೆರೆ ಮೇಲೆ ಯುವರತ್ನ ಸಿನಿಮಾ ಯಾವ ರೀತಿ ಮೋಡಿ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Edited By

Manjula M

Reported By

Manjula M

Comments