ನೀರಿನೊಳಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸ್ಟಂಟ್..!!
ಸದ್ಯ ಸ್ಯಾಂಡಲ್ ವುಡ್ ನ ದೂಳೆಬ್ಬಿಸಿರುತ್ತಿರುವ ಸಿನಿಮಾ ಅಂದ್ರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ. ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ಬರೀ ಪೋಸ್ಟರ್ ನಿಂದಾನೆ ಸಖತ್ ಸದ್ದು ಮಾಡುತ್ತಿದೆ.. ಇದೀಗ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹುನಿರೀಕ್ಷಿತ ʼರಾಬರ್ಟ್ʼ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಆಳವಾದ ನೀರಿನೊಳಗೆ ಸ್ಟಂಟ್ ಮಾಡುವ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ.
ಸ್ವಿಮ್ಮಿಂಗ್ ಪೂಲ್’ನಲ್ಲಿ ಇತ್ತೀಚೆಗೆ ರಾಬರ್ಟ್ ಸಿನಿಮಾದ ಸ್ಟಂಟ್ ನ ಚಿತ್ರೀಕರಣ ಮಾಡಲಾಗಿದೆ. ಈ ಸ್ಟಂಟ್ ನ ದೃಶ್ಯಗಳಿಗೆ ಮಾರ್ಗದರ್ಶನ ನೀಡಲೆಂದೇ ಮುಂಬೈನಿಂದ ನಾಲ್ವರು ಈಜು ಪರಿಣಿತರನ್ನು ಕರೆಯಿಸಿಕೊಳ್ಳಲಾಗಿತ್ತು.ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೆಹ್ರೀನ್ ಪಿರ್ಝಾದ ಹೀರೋಯಿನ್ ಆಗಿ ನಟಿಸುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಕುರುಕ್ಷೇತ್ರ ಸಿನಿಮಾದ ಸಕ್ಸಸ್ ನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಸಿನಿಮಾ ಒಡೆಯ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Comments