ಎನ್‌.ಧರ್ಮಸಿಂಗ್‌(80) ವಿಧಿವಶ

27 Jul 2017 12:51 PM | General
775 Report

ಬೆಂಗಳೂರು: ಹಿರಿಯ ಕಾಂಗ್ರೆಸ್ ಧುರೀಣ, ಮಾಜಿ ಮುಖ್ಯಮಂತ್ರಿ 80 ವರ್ಷ ವಯಸ್ಸಿನ ಎನ್‌.ಧರ್ಮಸಿಂಗ್‌ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಧರ್ಮಸಿಂಗ್ ಇಂದು ಬೆಳಿಗ್ಗೆ 9 ಗಂಟೆಗೆ ವಿಧಿವಶರಾಗಿದ್ದಾರೆ. ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ಸದಾಶಿವ ನಗರದಲ್ಲಿರುವ ಅವರ ನಿವಾಸಕ್ಕೆ ಸ್ಥಳಾಂತರಿಸಲಾಗಿದೆ.

2004ರಿಂದ 2006 ವರೆಗೆ ಮುಖ್ಯಮಂತ್ರಿಯಾಗಿದ್ದ ಧರ್ಮಸಿಂಗ್, ಕರ್ನಾಟಕದ 17ನೇ ಮುಖ್ಯಮಂತ್ರಿ ಎನ್ನುವ ಗೌರವಕ್ಕೆ ಪಾತ್ರರಾಗಿದ್ದರು. 1978 ರಿಂದ 2008 ರವರೆಗೆ ನಿರಂತರವಾಗಿ ವಿಧಾನಸಭೆಗೆ ಚುನಾವಣೆಯಲ್ಲಿ ಜಯಗಳಿಸಿ ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಗಳಿಸಿದ್ದರು.ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಸಮ್ಮಿಶ್ರ ಸರಕಾರದಲ್ಲಿ ಧರ್ಮಸಿಂಗ್ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. 2009ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದರು. ಆದರೆ, 2013 ರ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದರು.1936 ಡಿಸೆಂಬರ್ 25 ರಂದು ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಜನಿಸಿದ್ದ ಧರ್ಮಸಿಂಗ್, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಎಂಎ.ಎಲ್ಎಲ್‌ಬಿ ಪದವಿ ಪಡೆದಿದ್ದರು. ಕೆಲ ಕಾಲ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.

 

 

Edited By

Suhas Test

Reported By

Suhas Test

Comments