ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ವಿದ್ಯುಕ್ತ ಚಾಲನೆ

16 Aug 2017 12:26 PM | General
414 Report

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಉದ್ಘಾಟನೆ ಮಾಡಿದರು

ಬೆಂಗಳೂರಿನ ಜಯನಗರದ ಕನಕನಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಅನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಉದ್ಘಾಟನೆ ಮಾಡಿದರು. ಈ ವೇಳೆ ಕ್ಯಾಂಟೀನ್ ವೀಕ್ಷಿಸಿದ ರಾಹುಲ್ ಗಾಂಧಿ ಅವರು, ಕ್ಯಾಂಟೀನ್ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಇನ್ನು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಲೋಕಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹಾಗೂ ರಾಜ್ಯ ಉಸ್ತುವಾರಿ ಕೆ.ಎಲ್. ವೇಣುಗೋಪಾಲ್, ವಿಎಸ್ ಉಗ್ರಪ್ಪ, ಬಿಬಿಎಂಪಿ ಮೇಯರ್ ಜಿ ಪದ್ಮಾವತಿ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಹಾಜರಿದ್ದರು. ಎಲ್ಲ 27 ವಿಧಾನಸಭಾ ಕ್ಷೇತ್ರದಲ್ಲಿ ತಲಾ 1 ಅಡುಗೆ ಮನೆ ನಿರ್ಮಿಸಲಾಗಿದೆ. ಕ್ಯಾಂಟೀನ್ ನಲ್ಲಿ 5 ರು.ಗೆ ತಿಂಡಿ, 10 ರು.ಗೆ ಊಟ ಲಭಿಸಲಿದೆ.

Courtesy: Kannadaprabha

Comments