ಮಹಾಮಳೆಗೆ ಮುಂಬೈ ಮಹಾನಗರಿ ತತ್ತರ; ಜನಜೀವನ ಅಸ್ತವ್ಯಸ್ತ

29 Aug 2017 2:50 PM | General
389 Report

ಭಾರೀ ಮಳೆಗೆ ಮುಂಬೈ ಮಹಾನಗರಿ ತತ್ತರಿಹೋಗಿದ್ದು, ತಗ್ಗುಪ್ರದೇಶಗಳಲ್ಲಿ ಪ್ರವಾಹದ ರೀತಿಯಲ್ಲಿ ನೀರು ತುಂಬಿಕೊಂಡಿದ್ದು ಹಲವು ಭಾಗಗಳಲ್ಲಿ ರೈಲು, ಬಸ್ ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಜನಜೀವನ ಅಸ್ತವ್ಯಸ್ತಗೊಂಡಿದೆ.

ಎಎನ್‌ಐ ವರದಿ ಪ್ರಕಾರ, ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಸ್ಥಳೀಯ ರೈಲು ಸಂಚಾರ ಸ್ಥಗಿತಗೊಂಡಿದೆ. ಅಷ್ಟೇ ಅಲ್ಲದೇ ಉತ್ತರ ಕೊಂಕಣ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೂಡಾ ನೀಡಿದೆ.2005ರ ಜುಲೈ 26ರ ನಂತರ ಮುಂಬೈ ಮಹಾನಗರಿಯಲ್ಲಿ ಸುರಿದ ಮಹಾ ಮಳೆ ಇದಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಅಂದಾಜಿಸಿದ್ದಾರೆ. ಚಂಡಮಾರುತದಂತಹ ಹವಾಮಾನ ರೀತಿ ಇದೆ ಎಂದು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರ ತಿಳಿಸಿದ್ದಾರೆ.

ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಕೆಲವೆಡೆ ತಗ್ಗುಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ಜನರು ಪರದಾಡುವಂತಾಗಿದೆ ಎಂದು ವರದಿ ತಿಳಿಸಿದೆ. ಮಂಗಳವಾರ ಬೆಳಗ್ಗೆಯಿಂದ ಮಳೆ ಜತೆ ಬಲವಾದ ಗಾಳಿಯೂ ಬೀಸುತ್ತಿದೆ. 4.30ರ ತನಕ ಆಳೆತ್ತರದ ಅಲೆಗಳ ಹೊಡೆತ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ವಿವರಿಸಿದ್ದಾರೆ.

 

Courtesy: udayavani

Comments