ಇನ್ಮುಂದೆ ರೈತರಿಗೆ ಸಿಗಲಿವೆ ನಂ-1 ಪ್ರಾಮಾಣಿಕೃತ ಬಿತ್ತನೆ ಬೀಜ : ಸಚಿವ ಕೃಷ್ಣ ಭೈರೇಗೌಡ

30 Aug 2017 12:52 PM | General
579 Report

ಹೆಚ್ಚಿನ ಶ್ರಮವಹಿಸಿ ದುಡಿಯುವ ರೈತರಿಗೆ ಉತ್ತಮ ಇಳುವರಿ ಪಡೆಯಲು ನಂಬರ್-1 ಪ್ರಮಾಣೀಕೃತ ಬಿತ್ತನೆ ಬೀಜಗಳನ್ನು ಪೂರೈಸಲು ಸರ್ಕಾರ ಯೋಜನೆ ರೂಪಿಸಿ ಅನುಷ್ಟಾನಗೊಳಿಸಲು ಮುಂದಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಜಿಲ್ಲೆಯ ಶಿರಾ ತಾಲ್ಲೂಕಿನ ಭುವನಹಳ್ಳಿಯಲ್ಲಿ ರೂ. 357 ಲಕ್ಷ ವೆಚ್ಚದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ನಿರ್ಮಿಸಿರುವ ಬಿತ್ತನೆ ಬೀಜ ಸಂಸ್ಕರಣ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಒದಗಿಸದಿದ್ದರೆ ರೈತನ ಶ್ರಮ ಹಾಗೂ ಹಣ ಎಲ್ಲವೂ ಮಣ್ಣುಪಾಲಾಗುತ್ತದೆ. ಇದನ್ನರಿತ ರಾಜ್ಯ ಸರ್ಕಾರ ರೈತರಿಂದಲೇ ಬಿತ್ತನೆ ಬೀಜಗಳನ್ನು ಉತ್ಪಾದಿಸಿ ಶೇ. 100 ರಷ್ಟು ಉತ್ತಮ ಗುಣಮಟ್ಟದ ಪ್ರಾಮಾಣಿಕೃತ ನಂಬರ್-1 ಬಿತ್ತನೆ ಬೀಜಗಳನ್ನು ರೈತರಿಗೆ ಸರಬರಾಜು ಮಾಡಲು ಮುಂದಿನ ಮೂರು ವರ್ಷಗಳ ಬೇಡಿಕೆಯನ್ನು ಆಧರಿಸಿ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ಹಲವಾರು ವರ್ಷಗಳಿಂದ ರೈತರು ಬಿತ್ತನೆ ಮಾಡುವ ಸಮಯ ಪ್ರಾರಂಭವಾಗುವ ಹೊತ್ತಿಗೆ ಬೀಜ ಒದಗಿಸಲು ಏಪ್ರಿಲ್‍ನಲ್ಲಿ ಬಿತ್ತನೆ ಬೀಜ ಪೂರೈಕೆ ಮಾಡಲು ಬಿತ್ತನೆ ಬೀಜ ಒದಗಿಸುವ ಸಂಸ್ಥೆಗಳಿಗೆ ಬೇಡಿಕೆ ನೀಡಿ ಖರೀದಿಸಲಾಗುತ್ತಿತ್ತು. ಈ ರೀತಿ ತರಾತುರಿಯಲ್ಲಿ ಬಿತ್ತನೆ ಬೀಜ ಖರೀದಿ ಮಾಡುತ್ತಿದ್ದರಿಂದ 2ನೇ ದರ್ಜೆಯ ಬಿತ್ತನೆ ಬೀಜಗಳು ಸರಬರಾಜು ಆಗುತ್ತಿದ್ದವು. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಇದೀಗ ಇದನ್ನು ತಪ್ಪಿಸಿ ನಂಬರ್-1 ಪ್ರಾಮಾಣಿಕೃತ ಬಿತ್ತನೆ ಬೀಜ ಒದಗಿಸಲು ದೀರ್ಘಾವಧಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

Courtesy: eesanje

Comments