ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರ್ತರಾ ಕಾಂಗ್ರೆಸ್ ?

31 Aug 2017 3:43 PM | General
403 Report

ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಎಂಟ್ರಿಯಾಗಿ ತಮ್ಮದೇ ಸ್ವಂತ ಪಕ್ಷ ನಿರ್ಮಿಸ್ತಿರೋ ಹೊತ್ತಲ್ಲೇ ನಟ ದರ್ಶನ್ ಕೂಡ ರಾಜಕೀಯಕ್ಕೆ ಬರ್ತಾರೆ ಅನ್ನೋ ಚರ್ಚೆ ಶುರುವಾಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಅಂಬರೀಶ್ ಪ್ರಯತ್ನ ಆರಂಭಿಸಿದ್ದು,ಎಲ್ಲಾ ಲೆಕ್ಕಾಚಾರದಂತೆ ನಡೆದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ. ಆದ್ರೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಯುವ ಸಾಧ್ಯತೆ ಕಡಿಮೆ ಇದೆ. ಯಾಕಂದ್ರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಎದುರಾಳಿಯಾಗಿ ದರ್ಶನ್‍ರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತಿಸಿದೆ . 

Edited By

Suresh M

Reported By

Suresh M

Comments