ತಕ್ಷಣವೇ ಚುನಾವಣೆ ನಡೆದರೆ ಬಿಜೆಪಿ ಕಾರ್ಯಕರ್ತರಿಗೆ ಸಿಗಲಿದೆ ಸಂತಸದ ಸುದ್ದಿ !!

06 Sep 2017 2:38 PM | General
1767 Report

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯಕ್ಕೆ ಬಂದ ನಂತರ ಮೈಕೊಡವಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಬೀದಿಗಿಳಿದಿರುವ ಕಮಲ ಪಡೆಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಮಿಷನ್ 150 ಗುರಿಯೊಂದಿಗೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಮುಂದಾಗಿರುವ ಬಿಜೆಪಿ ತಕ್ಷಣವೇ ರಾಜ್ಯದಲ್ಲಿ ಚುನಾವಣೆ ನಡೆದರೆ 113 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರಳ ಬಹುಮತ ಬರಲಿದೆ ಎಂದು ಸಮೀಕ್ಷೆಯೊಂದು ಹೇಳಿದೆ.

ದೆಹಲಿ ಮೂಲದ ಸಿಒಪಿಎಸ್(ರಾಜಕೀಯ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ) ನಡೆಸಿರುವ ಸಮೀಕ್ಷೆ ಪ್ರಕಾರ ಈ ಪ್ರಕಾರ 224 ಕ್ಷೇತ್ರಗಳಲ್ಲಿ ಬಿಜೆಪಿಗೆ 113, ಆಡಳಿತಾರೂಢ ಕಾಂಗ್ರೆಸ್‍ಗೆ 86 ಹಾಗೂ ಜೆಡಿಎಸ್ 25 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ. ಈ ಹಿಂದೆ ದೇಶದ ವಿವಿಧ ಭಾಗಗಳಲ್ಲಿ ಸಿಒಪಿಎಸ್ ಸಂಸ್ಥೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೂ ಮುನ್ನ ಸಾಕಷ್ಟು ರಾಜ್ಯಗಳಲ್ಲಿ ಸಮೀಕ್ಷೆ ನಡೆಸಿದ್ದು ಫಲಿತಾಂಶ ರುಜುವಾತಾಗಿತ್ತು. ಅನೇಕ ರಾಜಕೀಯ ವಿಶ್ಲೇಷಕರು ಮತ್ತು ಪತ್ರಕರ್ತರು ಕೂಡ ಈ ಸಂಸ್ಥೆ ನೀಡುವ ಯಾವುದೇ ವರದಿಯನ್ನು ನಂಬುತ್ತಾರೆ.

ಇತ್ತೀಚೆಗೆ ನಡೆದ ಉತ್ತರಪ್ರದೇಶ, ಉತ್ತರಾಖಂಡ್‍ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಂಸ್ಥೆ ಹೇಳಿತ್ತು. ಆಡಳಿತ ವಿರೋಧಿ ಅಲೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಮೋಡಿ ಮತದಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Courtesy: eesanje

Comments