ನಮ್ಮ ಮೆಟ್ರೋ ಬದಲು ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡುವಂತೆ ಮನವಿ

07 Sep 2017 4:40 PM | General
370 Report

ನಗರದ ನಮ್ಮ ಮೆಟ್ರೋ ಸಾರಿಗೆ ಸಂಸ್ಥೆಗೆ ಬಸವೇಶ್ವರ ಮೆಟ್ರೋ ಎಂದು ನಾಮಕರಣ ಮಾಡುವಂತೆ ಶಿವಶಕ್ತಿ ಮಹಿಳಾ ಸಂಘ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದವು.

ಶಿವಶಕ್ತಿ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ಎಚ್.ಆರ್.ಉಮಾದೇವಿ, ಬಸವಣ್ಣನವರು ಅವರ ಕಾಲದಲ್ಲಿ ಹಲವಾರು ಸಮಾಜ ಕಲ್ಯಾಣ ಕಾರ್ಯಗಳನ್ನು ಮಾಡಿದ್ದಾರೆ. ಬಡವರು, ದೀನದಲಿತರು, ಹಿಂದುಳಿದವರು, ಶೋಷಿತ ಸಮಾನತೆಗೆ ಹೋರಾಟ ನಡೆಸಿದ್ದಾರೆ. ಅಲ್ಲದೆ ತಮ್ಮ ವಚನಗಳ ಮೂಲಕ ಕನ್ನಡ ಭಾಷೆಗೆ ಸುಭದ್ರವಾದ ಅಡಿಪಾಯವನ್ನು ಹಾಕಿದ್ದಾರೆ. ಆದ್ದರಿಂದ ನಮ್ಮ ಮೆಟ್ರೋಗೆ ಬಸವಣ್ಣನವರ ಹೆಸರನ್ನು ನಾಮಕರಣ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

Courtesy: eesanje

Comments