ನವಂಬರ್ 24 : ಮೂರು ದಿನಗಳಕಾಲ ಮೈಸೂರಿನಲ್ಲಿ ನಡೆಯಲಿರುವ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

12 Sep 2017 6:33 PM | General
279 Report

ಕನ್ನಡ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ ಈ ಸಮ್ಮೇಳನ ಮೂರು ದಿನಗಳ ಕಾಲ ಸಮ್ಮೇಳನ ಜರುಗಲಿದೆ ಎಂದು ತಿಳಿಸಿದ್ದಾರೆ.

ಡಿಸೆಂಬರ್ ನಲ್ಲಿ ವಿಶ್ವ ಕನ್ನಡ ಸಮ್ಮೇಳನ ಜರುಗುವುದರಿಂದ ಅದಕ್ಕೂ ಮುನ್ನವೇ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ಮೈಸೂರು ಉಸ್ತುವಾರಿ ಸಚಿವ ಎಚ್. ಸಿ ಮಹದೇವಪ್ಪ ಅವರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದರು. ಪ್ರತ್ಯೇಕ ನಾಡಧ್ವಜ , ಕೇಂದ್ರದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಹಾಗೂ ಮಾತೃಭಾಷಾ ಶಿಕ್ಷಣ ಕುರಿತು ಸಮ್ಮೇಳನದಲ್ಲಿ ಚರ್ಚೆಯಾಗುವ ಸಂಭವಿದೆ.ಈ ಭಾರಿ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎನ್ನುವುದನ್ನು ಇನ್ನಿಷ್ಟೇ ತಿಳಿಯಬೇಕಿದೆ.

Courtesy: Dailyhunt

Comments