ಆನ್ ಲೈನ್ ನಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಆಲೋಚನೆ.. !

28 Sep 2017 5:02 PM | General
292 Report

ತೈಲ ಮಾರಾಟಕ್ಕೂ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದೇ ಎಂಬ ಬಗ್ಗೆ ಚಿಂತನೆ ನಡೆಯುತ್ತಿದೆ. ಆನ್ ಲೈನ್ ನಲ್ಲಿ ಪೆಟ್ರೋಲ್, ಡೀಸೆಲ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾಧಕ ಬಾಧಕಗಳ ಕುರಿತು ಅಧ್ಯಯನ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನವನ್ನು ಸಾಕಷ್ಟು ಬಳಸಿಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಆನ್ ಲೈನ್ ನಲ್ಲೇ ಎಲ್ಲಾ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಿರುವುದಾಗಿ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಿಳಿಸಿದ್ದಾರೆ. ದೇಶದಲ್ಲಿ ಸದ್ಯ ನಾಲ್ಕು ಕೋಟಿ ಗ್ರಾಹಕರಿದ್ದಾರೆ. ಆದರೆ ಕೇವಲ ಒಂದು ಲಕ್ಷ ಔಟ್ ಲೆಟ್ ಗಳು ಮಾತ್ರ ಇವೆ ಎಂದು ಪೆಟ್ರೋಲಿಯಂ ಸಚಿವರು ಮಾಹಿತಿ ನೀಡಿದ್ದಾರೆ. ಅಲ್ಲದೆ ಪೆಟ್ರೋಲಿಯಂ ಉದ್ಯಮ ವರ್ಷಕ್ಕೆ 6.5ಲಕ್ಷ ಕೋಟಿ ವಹಿವಾಟು ನಡೆಸುತ್ತದೆ ಎಂದು ಹೇಳಿದ್ದಾರೆ.

Edited By

Hema Latha

Reported By

Madhu shree

Comments