ಸ್ವಾತಂತ್ರ್ಯ ಹೋರಾಟಗಾರನಿಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

28 Sep 2017 5:27 PM | General
306 Report

2017 ನೇ ಸಾಲಿನ ಪ್ರಶಸ್ತಿಗೆ ಹೆಚ್ ಎಸ್ ದೊರೆಸ್ವಾಮಿ ಅವರು ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಅಕ್ಟೋಬರ್ 2 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 6.00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮುಖಾಂತರ ಕಳೆದ ನಾಲ್ಕು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.ಕರ್ನಾಟಕ ರಾಜ್ಯ ಸರ್ಕಾರ ನೀಡುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ -2017 ಪ್ರಶಸ್ತಿಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಅವರನ್ನು ಆಯ್ಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆಮಾಡಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಈ ಪ್ರಶಸ್ತಿಯು ಐದು ಲಕ್ಷ ರೂ. ಗಳನ್ನು ಒಳಗೊಂಡಿರುತ್ತದೆ.

Edited By

Hema Latha

Reported By

Madhu shree

Comments