ಉಗ್ರ ಪ್ರತಿಭಟನೆಯ ನಡುವೆಯೂ ಪ್ರಕಾಶ್ ರೈಗೆ ಪ್ರಶಸ್ತಿ ಪ್ರದಾನ

10 Oct 2017 5:45 PM | General
293 Report

ಪ್ರಕಾಶ್ ರೈರವರಿಗೆ ಡಾ.ಶಿವರಾಂ ಕಾರಂತರ ಹುಟ್ಟೂರು ಪ್ರಶಸ್ತಿ ಪ್ರದಾನ ಮಾಡಲು ತಾಲೂಕಿನ ಕೋಟ ಗ್ರಾಮ ಪಂಚಾಯಿತಿ ವತಿಯಿಂದ ಇಂದು ಸಂಜೆ ಥೀಮ್‍ಪಾರ್ಕ್‍ನಲ್ಲಿ ಸಮಾರಂಭ ಆಯೋಜಿಸಲಾಗಿತ್ತು. ಆದರೆ, ರೈ ಪ್ರಧಾನಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ತಪ್ಪಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರೈಗೆ ಪ್ರಶಸ್ತಿ ನೀಡುವುದನ್ನು ಕೆಲವು ಸಂಘಟನೆಗಳು ವಿರೋಧಿಸಿದ್ದವು.

ಖ್ಯಾತ ನಟ ಪ್ರಕಾಶ್ ರೈಗೆ ಇಂದು ಥೀಮ್‍ಪಾರ್ಕ್‍ನಲ್ಲಿ ಪ್ರಶಸ್ತಿ ಪ್ರದಾನ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡುವ ಮೊದಲೇ ಕೋಟ ಗ್ರಾಮದ ಬಸ್ ನಿಲ್ದಾಣದ ಬಳಿ ಪೊಲೀಸರು 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದರು. ಪ್ರಕಾಶ್ ರೈ ಕೋಟ ಗ್ರಾಮಕ್ಕೆ ತಲುಪುವ ಮೊದಲೇ ಬಸ್ ನಿಲ್ದಾಣದಿಂದ ವಿವಿಧ ಸಂಘಟನೆಗಳ ಮುಖಂಡರು ಕಪ್ಪು ಬಾವುಟ, ಫ್ಲಕ್ಸ್ ಹಿಡಿದು ಪ್ರತಿಭಟನಾ ಮೆರವಣಿಗೆಗೆ ಸಜ್ಜಾಗಿದ್ದರು. ಅಷ್ಟರಲ್ಲಿ ಪೊಲೀಸರು 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಪ್ರತಿಭಟನೆಯನ್ನು ವಿಫಲ ಮಾಡಿದರು. ನಂತರ ಕಾರ್ಯಕ್ರಮ ಸುಸೂತ್ರವಾಗಿ ನಡೆಯಿತು. ಕಾರ್ಯಕ್ರಮಕ್ಕೂ ಮೊದಲು ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಪ್ರಕಾಶ್ ರೈ ಪ್ರತಿಭಟನೆ ಮಾಡುವುದು ಅವರವರ ಹಕ್ಕು. ಕಾರಂತರು ನನ್ನ ಅಜ್ಜ. ಅವರು ನನಗೆ ಆತ್ಮೀಯರಾಗಿದ್ದರು. ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವುದು ನನಗೆ ಬಹಳ ಹೆಮ್ಮೆ ಎಂದು ಹೇಳಿಕೊಂಡರು.

Edited By

Shruthi G

Reported By

Madhu shree

Comments