ಜಾರ್ಜ್ ರಾಜಿನಾಮೆಗೆ ಪ್ರತಿಕ್ರಿಯಿಸಿದ ಎಚ್ ಡಿಕೆ

ಜೆಡಿಎಸ್ ಮಾತ್ರ ಸಚಿವ ಜಾರ್ಜ್ ಬೆಂಬಲಕ್ಕೆ ನಿಂತಿದ್ದು, ಎಫ್‌ಐಆರ್ ದಾಖಲಿಸಿದ ತಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ್ದು, ಅವರು ಈ ಕೂಡಲೇ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ.ಆದರೆ ಜೆಡಿಎಸ್ ಮಾತ್ರ ಸಚಿವ ಜಾರ್ಜ್ ಬೆಂಬಲಕ್ಕೆ ನಿಂತಿದ್ದು, ಎಫ್‌ಐಆರ್ ದಾಖಲಿಸಿದ ತಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಜೆಪಿನಗರದ ತಮ್ಮ ನಿವಾಸದಲ್ಲಿ ಜಾರ್ಜ್ ರಾಜಿನಾಮೆಗೆ ಬಿಜೆಪಿ ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಎಫ್‌ಐಆರ್ ದಾಖಲಿಸಿದಾಕ್ಷಣ ರಾಜಿನಾಮೆ ನೀಡಬೇಕಾಗಿಲ್ಲ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಯಾವುದಾದರು ಸಾಕ್ಷ್ಯ ಸಿಕ್ಕರೆ ರಾಜಿನಾಮೆ ನೀಡಬೇಕು. ಹೀಗಾಗಿ ಸದ್ಯ ನಾನು ಜಾರ್ಜ್ ರಾಜಿನಾಮೆಗೆ ಆಗ್ರಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಸಿಬಿಐ ಎಫ್‌ಆಆರ್ ದಾಖಲಿಸುತ್ತಿದ್ದಂತೆ ಮತ್ತೆ ಸಚಿವ ಜಾರ್ಜ್ ವಿರುದ್ಧ ಹೋರಾಟಕ್ಕೆ ಬಿಜೆಪಿ ಅಣಿಯಾಗಿದ್ದು, ಸಚಿವರ ರಾಜಿನಾಮೆಗೆ ಆಗ್ರಹಿಸಿ ವ್ಯವಸ್ಥಿತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
Comments