ಏಪ್ರಿಲ್ 18, 19 ರಂದು ಸಿ.ಇ.ಟಿ ಪರೀಕ್ಷೆ

08 Nov 2017 9:39 AM | General
465 Report

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ 12 ದಿನ ಮೊದಲೇ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿ.ಇ.ಟಿ.) ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2018 -19 ನೇ ಸಾಲಿನ ಸಿ.ಇ.ಟಿ. ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 18 ಮತ್ತು 19 ರಂದು ಪರೀಕ್ಷೆ ನಡೆಯಲಿವೆ.

ಸಾಮಾನ್ಯವಾಗಿ ಮೇ ಮೊದಲ ವಾರದಲ್ಲಿ ಸಿ.ಇ.ಟಿ. ನಡೆಸಲಾಗುತ್ತಿತ್ತು. ಈ ಬಾರಿ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 18, 19 ರಂದು ಪರೀಕ್ಷೆ ನಿಗದಿ ಮಾಡಲಾಗಿದೆ.ಏಪ್ರಿಲ್ 18 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ ಗಣಿತ, ಏಪ್ರಿಲ್ 19 ರಂದು ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿವೆ.ಹೊರನಾಡು, ಗಡಿನಾಡು ಕನ್ನಡಿಗರಿಗೆ ಬೆಂಗಳೂರಿನಲ್ಲಿ ಏಪ್ರಿಲ್ 20 ರಂದು ಬೆಳಿಗ್ಗೆ 11.30 ರಿಂದ 12.30 ರ ವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

Edited By

Shruthi G

Reported By

Shruthi G

Comments