ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಲು ನನಗೆ ಇಷ್ಟವಿಲ್ಲ : ದೇವೇಗೌಡರ ಕಿಡಿ

23 Nov 2017 12:56 PM | General
434 Report

ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಲು ನನಗೆ ಇಷ್ಟವಿಲ್ಲ. ಹೀಗಾಗಿ, ಸ್ವಂತ ಬಲದ ಮೇಲೆ ಸರ್ಕಾರ ರಚಿಸಬೇಕು. ಅದಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಮತದಾರರು ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮನವಿ ಮಾಡಿದರು.

ನಗರದ ಮಹಾಂತಯ್ಯನಮಠ ಕಲ್ಯಾಣ ಮಂಟಪದಲ್ಲಿ ನಡೆದ ಕೊಪ್ಪಳ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ರಾಜಕೀಯ ಮುಖಂಡರನ್ನು ಬೆಳೆಸುವ ಶಕ್ತಿ ಇರುವುದು ಕಾರ್ಯರ್ತರು ಹಾಗೂ ಜನರಿಗೆ ಮಾತ್ರ.  ಸಿಎಂ ಸಿದ್ದರಾಮಯ್ಯ ಕೂಡ ಜೆಡಿಎಸ್‌ನಲ್ಲೇ ಬೆಳೆದವರು. ಜೆಡಿಎಸ್‍ನಿಂದ ಆಯ್ಕೆಯಾಗಿ ಕೆಲವರು ಇದೀಗ ಪಕ್ಷ ಬಿಟ್ಟು ಬೇರೆಡೆ ಹೋಗಿದ್ದಾರೆ. ಆದರೆ ಕುಮಾರಸ್ವಾಮಿ ಕೆಲವೇ ತಿಂಗಳ ಅಧಿಕಾರ ನಡೆಸಿದರೂ ಜನಪರ, ರೈತಪರ ಆಡಳಿತ ನೀಡಿದ್ದಕ್ಕೆ ಇಂದು ರಾಜ್ಯದ ಜನತೆ ಜೆಡಿಎಸ್ ಪರ ವಾಲಿದ್ದಾರೆ. ಕುಮಾರಸ್ವಾಮಿ ಅಧಿಕಾರ ನಡೆಸಿದ್ದೇ ನನಗೆ ಇಷ್ಟವಿರಲಿಲ್ಲ. ಆದರೆ ಕುಮಾರಸ್ವಾಮಿ ಉತ್ತಮ ಆಡಳಿತ ನೀಡಿದ್ದು, ಅವರ ಅಧಿಕಾರವಧಿಯಲ್ಲಿ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಬದಲು ಜನರಿಗೆ ದುಡಿಯುವ ಶಕ್ತಿ ನೀಡಿದರೇ ಎಲ್ಲರೂ ಹಸಿವು ಮುಕ್ತರಾಗಿ ನೆಮ್ಮದಿ ಜೀವನ ನಡೆಸುತ್ತಾರೆ ಎಂದು ದೇವೇಗೌಡರು ಅಭಿಪ್ರಾಯಪಟ್ಟರು.ಇನ್ನು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರಲು ಈಗಾಗಲೇ ನಿರ್ಧಾರ ಮಾಡಲಾಗಿದೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದರೆ ರೈತರ ಎಲ್ಲ ರೀತಿಯ ಸಾಲವನ್ನು ಮನ್ನಾ ಮಾಡಲು ಸಹ ನಿರ್ಧರಿಸಿದ್ದಾರೆ. ಒಂದು ಪ್ರಾದೇಶಿಕ ಪಕ್ಷವಾಗಿ ನಾವು ಕಳೆದ ಚುನಾವಣೆಯಲ್ಲಿ 40 ಸ್ಥಾನ ಗಳಿಸಿದ್ದೆವು. ಇದಕ್ಕೆ ನಾವು ಜನರಿಗೆ ಋಣಿಯಾಗಿದ್ದೇವೆ. ಪ್ರಸ್ತುತ ಸರ್ಕಾರದ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜನರು ಮನಸ್ಸು ಮಾಡಿದ್ದಾರೆ. ಈ ಬಾರಿ ರಾಜ್ಯದ ಜನರು ಸಂಪೂರ್ಣವಾಗಿ ಜೆಡಿಎಸ್ ಬೆಂಬಲಿಸಲಿದ್ದು 120 ಸೀಟ್‌ಗಳನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿಂಧ್ಯಾ ಹೇಳಿದರು.

Edited By

Shruthi G

Reported By

Shruthi G

Comments