ಗೋವಿಂದೇಗೌಡನ ಕೊಲೆ ಪ್ರಕರಣಕ್ಕೆ ನ್ಯಾಯ ದೊರೆಕ್ಕಿಸುವಂತೆ ಎಚ್ ಡಿಕೆ ಆಗ್ರಹ

11 Dec 2017 11:39 AM | General
744 Report

ಗೋವಿಂದೇಗೌಡ ಅವರನ್ನು ಕೊಲೆಮಾಡಿದವರನ್ನು ಪತ್ತೆಹಚ್ಚಿ ಎನ್‌ಕೌಂಟರ್‌ ಮಾಡಬೇಕು. ಆಗ ಕೊಲೆಗಡುಕರಲ್ಲಿ ಭಯ ಮೂಡುತ್ತದೆ ಎಂದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ಜೆಡಿಎಸ್ ಪಕ್ಷದ ಆಂಜಿನಪ್ಪ ನಿರ್ಮಿಸಿದ ಅಪ್ಪಾಜಿ ಕ್ಯಾಂಟೀನ್‌ ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಎಗ್ಗಿಲ್ಲದೆ ನಡೆಯುತ್ತಿವೆ. ಕಾಂಗ್ರೆಸ್‌ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸೋತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಿ ಎಂದರು.

ನಮ್ಮ ಕಾರ್ಯಕರ್ತರು ಜೆಡಿಎಸ್‌ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಹೆಸರಿನಲ್ಲಿ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ. ಇದು ನಮ್ಮ ಪಕ್ಷದ ನೀತಿ ಮತ್ತು ರೀತಿ ಎಂದು ಕಾರ್ಯಕರ್ತರ ಸೇವೆಯನ್ನು ಸ್ಮರಿಸಿದರು.ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ‘ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಟೀ, ಕಾಫಿ, ಹಾಲು ₹3ಕ್ಕೆ, ತಿಂಡಿ ₹5ಕ್ಕೆ ಹಾಗೂ ಊಟ ₹10ಕ್ಕೆ ರಿಯಾಯಿತಿ ದರದಲ್ಲಿ ಸಿಗಲಿದೆ. ಆಂಜಿನಪ್ಪ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಕ್ಯಾಂಟೀನ್‌ ನಿರ್ವಹಿಸಲಿದ್ದಾರೆ ಎಂದರು.

Edited By

Shruthi G

Reported By

Shruthi G

Comments