ನಂಜನಗೂಡಿನ ಕ್ಷೇತ್ರದ ಸ್ಪರ್ಧೆ ಬಗ್ಗೆ ದೇವೇಗೌಡ್ರು ಹೇಳಿದ್ದು ಹೀಗೆ

14 Dec 2017 4:17 PM | General
4302 Report

ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ಮೈಸೂರಿನ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯಕ್ಕೆ ಮಾಜಿ ಪ್ರಧಾನಿ ಎಚ್​​.ಡಿ ದೇವೇಗೌಡ ಭೇಟಿ ನೀಡಿ ಶ್ರೀಕಂಠೇಶ್ವರ ಹಾಗೂ ಪಾರ್ವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಂಜನಗೂಡಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದೇವೇಗೌಡರು, ಚಿಕ್ಕಂದಿನಲ್ಲಿ ನನಗೆ ಕಿವಿ ಕೇಳಿಸುತ್ತಿರಲಿಲ್ಲ, ಆಗ ನನ್ನ ತಂದೆ ತಾಯಿ ನಂಜುಂಡೇಶ್ವರನಿಗೆ ನನ್ನ ಮುಡಿ ಕೊಟ್ಟರು, ಅಂದಿನಿಂದ ನನಗೆ ನಂಜುಂಡೇಶ್ವರನ ಮೇಲೆ ಅತಿಯಾದ ನಂಬಿಕೆ,ಜತೆಗೆ ಇಲ್ಲಿನ ಜನರ ಬಗ್ಗೆ ವಿಶ್ವಾಸ ಪ್ರೀತಿ ಇದೆ ಎಂದರು.

2018ರ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಉಪ ಚುನಾವಣೆಗೆ ಮಾತ್ರ ಅಭ್ಯರ್ಥಿ ಹಾಕಿರಲಿಲ್ಲ' ಎಂದು ಎಚ್.ಡಿ.ದೇವೇಗೌಡ ಹೇಳಿದರು.ಬಿಜೆಪಿಗೆ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಲ್ಲ. ಆದ್ದರಿಂದ, ಉಪಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. 2018ರ ಚುನಾವಣೆಗೆ ಅಭ್ಯರ್ಥಿ ಹಾಕುತ್ತೇವೆ' ಎಂದು ಮಾಜಿ ಪ್ರಧಾನಿ ಎಚ್​​.ಡಿ ದೇವೇಗೌಡತಿಳಿಸಿದರು.

ಸಂಬಂಧಿಕರ ಒತ್ತಾಯಕ್ಕೆ ಮಣಿದು, ಅರ್ಧ ವರ್ಷಕ್ಕಾಗಿ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಶಾಸಕ ಕಳಲೆ ಕೇಶವಮೂರ್ತಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.ಶ್ರೀನಿವಾಸ ಪ್ರಸಾದ್ ಅವರು ಪಕ್ಷ ಬಿಟ್ಟು ಹೋದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಪ ಮಾಡಿಕೊಂಡರು. ಶ್ರೀನಿವಾಸ ಪ್ರಸಾದ್ ಅವರಷ್ಟು ಒಳ್ಳೆಯ ವ್ಯಕ್ತಿ ಇನ್ನೊಬ್ಬರಿಲ್ಲ ಎಂದರು.

Edited By

Shruthi G

Reported By

Shruthi G

Comments